ಕಂಚನಾಳ ಬ್ರಿಡ್ಜ್ ಕಂ ಬ್ಯಾರೇಜ್ ಅಡಿಗಲ್ಲು
Team Udayavani, Jan 25, 2022, 1:07 PM IST
ಕಾಳಗಿ: ತಾಲೂಕಿನ ಕಂಚನಾಳ ಗ್ರಾಮದಲ್ಲಿ 2021-22ನೇ ಸಾಲಿನ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆ ಅಡಿ ಸುಮಾರು 3.31ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ಡಾ| ಅವಿನಾಶ ಜಾಧವ ಅಡಿಗಲ್ಲು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಕಂಚನಾಳ ಗ್ರಾಮದ ಜನರ ಇಪ್ಪತ್ತು ವರ್ಷಗಳ ಕನಸು ಇಂದು ನನಸಾಗಿದ್ದು, ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ಇದರಿಂದ ಸುಮಾರು 110 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದರ ಜೊತೆಗೆ ಸುತ್ತಮುತ್ತಲಿನ ಗ್ರಾಮದ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರು ಒದಗಿಸುತ್ತದೆ. ಅಂರ್ತಜಲ ಮಟ್ಟವು ಹೆಚ್ಚಳವಾಗುತ್ತದೆ ಎಂದರು.
ಮಳೆಗಾಲ ಸಮಯದಲ್ಲಿ ಎಷ್ಟೇ ಹಳ್ಳ ತುಂಬಿ ಹರಿದರೂ ಕೂಡ ಗ್ರಾಮಸ್ಥರು ಸೇತುವೆ ಮೂಲಕ ದಾಟಿ ಹೋಗಬಹುದು. ಹಿಂದೆ ಪಟ್ಟಿರುವ ಕಷ್ಟಗಳೆಲ್ಲ ಈಗ ಪರಿಹಾರವಾಗಲಿದೆ. ಇದಕ್ಕೆ ಗ್ರಾಮಸ್ಥರ ಸಹಕಾರ ಪಡೆದು ಮಳೆಗಾಲ ಪ್ರಾರಂಭಗೊಳ್ಳುವುದರೊಳಗೆ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದದರು.
ಸಂಸದ ಡಾ| ಉಮೇಶ ಜಾಧವ ಮಾತನಾಡಿ, ಶಾಸಕರ ಪರಿಶ್ರಮದಿಂದ ಇಂದು ಕಂಚಾನಾಳ ಗ್ರಾಮದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಅನುಕೂಲವಾಗುವುದರ ಜೊತೆಗೆ ಸುಮಾರು 200 ರೈತರಿಗೆ ನೀರಾವರಿ ವ್ಯವಸಾಯಕ್ಕೆ ಉಪಯೋಗವಾಗಲಿದೆ ಎಂದರು.
ಚಿಂಚೋಳಿ ಮತಕ್ಷೇತ್ರದಲ್ಲಿ ನೀರಿನ ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕಂಚನಾಳ ಗ್ರಾಮದಲ್ಲಿ 3 ಕೋಟಿ ಹಾಗೂ ಕನಕಪೂರ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.
ರಟಕಲ್ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಗ್ರಾಪಂ ಅಧ್ಯಕ್ಷೆ ತೇಜಮ್ಮ ಆಳಂದ, ಉಪಾಧ್ಯಕ್ಷ ನಾಗರಾಜ ಹಂದ್ರೋಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿಲಕುಮಾರ ರಾಠೊಡ, ಮಾಜಿ ಗ್ರಾಪಂ ಉಪಾಧ್ಯಕ್ಷೆ ರೇಣುಕಾ ಬಿರೆದಾರ, ಶಿವರಾಜ ಪಾಟೀಲ ಗೊಣಗಿ, ಎಸಿ ಉಮೇಶ ಚವ್ಹಾಣ, ಪ್ರಶಾಂತ ಪಾಟೀಲ, ಸಂತೋಷ ಗುತ್ತೇದಾರ, ರಾಜು ಜಾಧವ, ಸಿದ್ದು ಬಿರೆದಾರ, ರೇವಣಸಿದ್ದ ಬಡಾ, ವಿಜಯಕುಮಾರ ಚೆಂಗಟಿ, ಪ್ರಶಾಂತ ಕದಮ, ರಮೇಶ ಕಿಟ್ಟದ, ಸಂತೋಷ ಜಾಧವ, ಗಣೇಶ ಸಿಂಗಶೆಟ್ಟಿ, ಸಣ್ಣನೀರಾವರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಶರಣಪ್ಪ ಕೇಶ್ವಾರ ಇದ್ದರು. ಮಹೇಶ ಪಾಟೀಲ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.