ಬತ್ತುತ್ತಿದೆ ಬ್ಯಾರೇಜ್-ಬೆಳೆಗೆ ನೀರಿನ ಕೊರತೆ
Team Udayavani, Feb 1, 2022, 12:33 PM IST
ಚಿಂಚೋಳಿ: ತಾಲೂಕಿನ ಮುಲ್ಲಾಮಾರಿ ನದಿಗೆ ನಿರ್ಮಿಸಲಾಗಿರುವ ಬ್ಯಾರೇಜ್‌ಗಳಿಗೆ ಇನ್ನುವರೆಗೆ ಗೇಟ್ ಅಳವಡಿಸದೇ ಇರುವುದರಿಂದ ನೀರು ವ್ಯರ್ಥವಾಗಿ ಹರಿದು ರೈತರ ಬೆಳೆಗಳಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಮುಲ್ಲಾಮಾರಿ ನದಿಯ ಅಕ್ಕಪಕ್ಕ ರೈತರು ದೂರಿದ್ದಾರೆ.
ತಾಲೂಕಿನ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಕೊಟಗಾ, ಕನಕಪೂರ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಪೋಲಕಪಳ್ಳಿ, ಗರಗಪಳ್ಳಿ, ಜಟ್ಟೂರ ಗ್ರಾಮಗಳ ಹತ್ತಿರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ.
ಎಲ್ಲ ಬ್ಯಾರೇಜ್‌ಗಳಿಗೆ ಜಲ ಸಂಪನ್ಮೂಲ ಇಲಾಖೆಯಿಂದ ನವೆಂಬರ್ ತಿಂಗಳಲ್ಲಿಯೇ ಗೇಟ್ ಅಳವಡಿಸಿ ನೀರಿನ ಸಂಗ್ರಹಣೆ ಮಾಡುವ ಕಾರ್ಯ ನಡೆಯಬೇಕಾಗಿತ್ತು. ಆದರೆ ಇಲಾಖೆ ಅಧಿಕಾರಿಗಳ ಬೇಜಾವಾಬ್ದಾರಿಯಿಂದ ಎಲ್ಲ ಬ್ಯಾರೇಜ್‌ಗಳಿಗೆ ಗೇಟ್‌ಗಳು ಅಳವಡಿಸದೇ ಇರುವುದರಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.
ಮುಲ್ಲಾಮಾರಿ ನದಿಗೆ ನಿರ್ಮಿಸಿದ ಬ್ಯಾರೇಜ್‌ಗಳಲ್ಲಿನ ನೀರಿನ ಸಂಗ್ರಹಣೆ ಆಧಾರ ಮೇಲೆ ನದಿ ದಡದ ರೈತರು ತಮ್ಮ ಹೊಲಗಳಲ್ಲಿ ಹೆಚ್ಚಾಗಿ ತರಕಾರಿ, ಕಲ್ಲಂಗಡಿ, ದ್ರಾಕ್ಷಿ, ಕಬ್ಬು, ಬಾಳೆ, ನೀರಾವರಿ ಬೆಳೆಗಳು ಬೆಳೆಯುತ್ತಾರೆ. ಆದರೆ ನದಿಯಲ್ಲಿ ನೀರಿನ ಸಂಗ್ರಹಣೆ ಕಡಿಮೆ ಇರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಆಗುತ್ತಿಲ್ಲ ಎಂಬುದು ರೈತರ ಕೊರಗು.
ಮುಲ್ಲಾಮಾರಿ ನದಿಯಲ್ಲಿ ರಾಜಾರೋಷವಾಗಿ ಟ್ರ್ಯಾಕ್ಟರ್, ಲಾರಿ, ಟಂಟಂ, ವಾಹನಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುವ ಮರಳುಗಳ್ಳರ ಹಾವಳಿ ಹೆಚ್ಚಾಗಿದೆ. ಕೊಟಗಾ, ಅಡಕಿಮೊಕ ತಾಂಡಾ, ಚಿಮ್ಮನಚೋಡ, ಕನಕಪೂರ, ತಾಜಲಾಪೂರ, ಮರಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ದೇಗಲಮಡಿ, ಚಿಂಚೋಳಿ, ಪೋಲಕಪಳ್ಳಿ, ಭಗರಗಪಳ್ಳಿ-ಭಕ್ತಂಪಳ್ಳಿ, ಹಲಕೊಡಾ, ಪೋತಂಗಲ, ಜಟ್ಟೂರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಟ ಹೆಚ್ಚಾಗಿರುವುದರಿಂದ ನದಿ ನೀರು ಬತ್ತಿ ಹೋಗುತ್ತಿದೆ.
ಬೇಸಿಗೆ ದಿನಗಳಲ್ಲಿ ದನಕರುಗಳಿಗೆ ಕುಡಿಯುವ ನೀರು ಸಂಗ್ರಹಣೆ ಅತಿ ಅವಶ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಗರಗಪಳ್ಳಿ ಬ್ಯಾರೇಜ್‌ಗೆ ಗೇಟ್ ಅಳವಡಿಸಬೇಕು ಎಂದು ಮುಲ್ಲಾಮಾದಿ ನದಿ ದಂಡೆಯ ರೈತರು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.