ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಲಿ
Team Udayavani, Jul 19, 2022, 12:31 PM IST
ಚಿಂಚೋಳಿ: ಮೀಸಲು ಮತಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಸಾಧಿಸಲು ಕಾರ್ಯಕರ್ತರು ಸಂಘಟಿತರಾಗಿ ಶ್ರಮಿಸಬೇಕೆಂದು ಎಂದು ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ಹೇಳಿದರು.
ಪಟ್ಟಣದ ಹಾರಕೂಡ ಚೆನ್ನ ಬಸವೇಶ್ವರ ಕಲ್ಯಾಣಮಂಟಪದಲ್ಲಿ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರದಿಂದ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಮಳೆ ಹಾನಿಯಿಂದ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಮತ್ತು ಮನೆಗಳು ಬಿದ್ದಿವೆ. ಆದರೆ ಶಾಸಕರು ಯಾವುದೇ ಗ್ರಾಮಗಳಿಗೆ ಭೇಟಿ ನೀಡಿಲ್ಲ. ಈ ಕುರಿತು ಕಾಂಗ್ರೆಸ್ ಮುಖಂಡರು ಗಮನಹರಿಸಿ ಪಕ್ಷ ಸಂಘಟನೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಜಿಪಂ ಮಾಜಿ ಅಧ್ಯಕ್ಷ ಭೀಮರಾವ್ ತೇಗಲತಿಪ್ಪಿ, ಕನ್ನಿರಾಮ ರಾಠೊಡ, ಮಹಾಂತಪ್ಪ ಸಂಗಾವಿ, ಮಹೆಮೂದ್ ಪಟೇಲ ದೇವೇಂದ್ರಪ್ಪ ಹೆಬ್ಟಾಳ, ತಾಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಸವರಾಜ ಮಲಿ ಮಾತನಾಡಿದರು.
ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ, ಸುರೇಶಬಂಟಾ, ಡಾ| ತುಕಾರಾಮ ಪವಾರ, ಶರಣು ತೆಗನೂರ, ಮಲ್ಲಿಕಾರ್ಜುನ, ಶಂಕರ ಸುತಾರ, ರೇವಣಸಿದ್ಧ ಅರಣಕಲ್, ಮಲ್ಲಿಕಾರ್ಜುನ ಭೂಶೆಟ್ಟಿ, ಜಗನ್ನಾಥ ಪೂಜಾರಿ, ಪಾರ್ವತಿ ಪೋಲಕಪಳ್ಳಿ, ಆನಂದ ಜಾಧವ, ಗೋವಿಂದ ರಾಠೊಡ, ಜಗನ್ನಾಥ ಇದಲಾಯಿ, ವೀರಮ್ಮ ಸ್ವಾಮಿ ಸೇರಿದಂತೆ 68 ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ತಾಲೂಕು ಎಸ್‌ಸಿ ಘಟಕ ಅಧ್ಯಕ್ಷ ಸಂತೋಷ ಗುತ್ತೇದಾರ ಸ್ವಾಗತಿಸಿದರು, ಶರಣು ಪಾಟೀಲ ನಿರೂಪಿಸಿದರು, ಚಿತ್ರಶೇಖರ ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.