ಲೆಕ್ಕಾಚಾರವಿಲ್ಲದ ಬದುಕು ಪರಿಪೂರ್ಣವಲ್ಲ: ಮೊಹಮ್ಮದ್
Team Udayavani, Dec 23, 2021, 11:56 AM IST
ಜೇವರ್ಗಿ: ಗಣಿತ ಕೇವಲ ವಿಷಯವಲ್ಲ. ಮಾನವನ ಜನನದಿಂದ ಮರಣದ ವರೆಗೆ ಪ್ರತಿಕ್ಷಣ ಅವಶ್ಯಕವಾಗಿದೆ ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಬುಧವಾರ ಏರ್ಪಡಿಲಾಗಿದ್ದ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ರ ಜನ್ಮ ದಿನವಾದ “ರಾಷ್ಟ್ರೀಯ ಗಣಿತ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಲೆಕ್ಕವಿದ್ದರೆ ಜೀವನ ಪಕ್ಕ. ಗಣಿತವಿಲ್ಲದ ಜೀವನ ಉಹಿಸಲು ಅಸಾಧ್ಯ. ಲೆಕ್ಕಾಚಾರವಿಲ್ಲದ ಬದುಕು ಪರಿಪೂರ್ಣವಾಗಲಾರದು. ಗಣಿತ ಅಧ್ಯಯನ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು.
ಗಣಿತಶಾಸ್ತ್ರ ಉಪನ್ಯಾಸಕಿ ನಯಿಮಾ ನಾಹಿದ್ ಮಾತನಾಡಿ, ಗಣಿತ ಜಗತ್ತಿಗೆ ಅನೇಕ ಸಿದ್ಧಾಂತ, ಕಲ್ಪನೆ, ಸೂತ್ರಗಳನ್ನು ನೀಡುವ ಮೂಲಕ ರಾಮಾನುಜನ್ ಗಣಿತಶಾಸ್ತ್ರ ಕ್ಷೇತ್ರ ಶ್ರೀಮಂತಗೊಳಿಸಿದ್ದಾರೆ ಎಂದರು. ಎನ್‌ಎಸ್‌ಎಸ್ ಅಧಿಕಾರಿ ಎಚ್.ಬಿ. ಪಾಟೀಲ, ಉಪನ್ಯಾಸಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.