ಹಲವು ಕಾಮಗಾರಿಗಳಿಗೆ ಒಂದೇ ನಾಮಫಲಕ ಬಳಕೆ


Team Udayavani, Feb 14, 2022, 12:24 PM IST

11name

ಆಳಂದ: ಖಜೂರಿ ಹೊಲಗಳ ಮತ್ತು ಗ್ರಾಮ ಸಂರ್ಪಕ ಕಲ್ಪಿಸುವ ಮೂರು ರಸ್ತೆಗಳನ್ನು ಕೈಗೊಳ್ಳದೇ ನೇರವಾಗಿ ಕಾಮಗಾರಿಯಾಗಿದೆ ಎಂದು ಖರ್ಚಿನ ನಾಮಫಲಕ ಹಾಕಿರುವ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ರೈತರು ಮತ್ತು ಮುಖಂಡರು, ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಕುರಿತು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ರವಿವಾರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಶೋಕ ಸಾವಳೇಶ್ವರ ಅವರು, ಖಜೂರಿಯಲ್ಲಿನ ರಸ್ತೆಯೊಂದಕ್ಕೆ ಕಾಮಗಾರಿ ಮಾಡದೇ ಕಾಮಗಾರಿಯಾದ ಐದು ಲಕ್ಷ ರೂಪಾಯಿ ಖರ್ಚಿನ ನಾಮಫಲಕ ಹಾಕಿರುವುದನ್ನು ತೋರಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ರೈತರ ಹೊಲಗಳಿಗೆ ಹೋಗಲು ರಸ್ತೆ ಸಮಸ್ಯೆಯಾಗಿದೆ ಎಂದು ಖಜೂರಿಯಲ್ಲಿ ತಲಾ ಎರಡ್ಮೂರು ಸಾವಿರ ರೂ. ಚಂದಾಹಾಕಿ ಸ್ವತಃ ರೈತರೆ ರಸ್ತೆ ಮಾಡಿಕೊಂಡಿದ್ದಾರೆ. ಜಿಪಂನಿಂದ ರಸ್ತೆ ಕೈಗೊಳ್ಳುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಅಧಿಕಾರಿಗಳು ನೋಡೋಣಾ ಮಾಡೋಣಾ ಎಂದು ಹಾರಿಕೆ ಉತ್ತರ ನೀಡಿದ್ದರು. ಇದರಿಂದ ಬೇಸತ್ತು ರೈತರು ಸ್ವಂತ ಖರ್ಚಿನಿಂದ ಚಂದಾಕೂಡಿಸಿ ಕಚ್ಚಾ ರಸ್ತೆ ಮಾಡಿಕೊಂಡಿದ್ದಕ್ಕೆ ಈಗ ಅಧಿಕಾರಿಗಳು ನೇರವಾಗಿ ಬಂದು ಜಿಪಂನಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ವೆಚ್ಚದಲ್ಲಿ ರಸ್ತೆ ಕಾಮಗಾರಿಯಾಗಿದೆ ಎಂದು ಹಲವು ಕಡೆ ಐದೈದು ಲಕ್ಷ ರೂ. ಖರ್ಚಿನ ಫಲಕಹಾಕಿದ್ದಾರೆ ಎಂದು ಆಪಾದಿಸಿದರು.

ಮಧ್ಯಾಹ್ನ ಯಾರೂ ಇಲ್ಲದ ಹೊತ್ತಿನಲ್ಲಿ ಒಂದೇ ಜಾಗದಲ್ಲಿ ನೆಟ್ಟ ನಾಮ ಫಲಕದಲ್ಲಿ ಹಲವು ರಸ್ತೆಯ ಕಾಮಗಾರಿ ಕುರಿತ ಫಲಕಕ್ಕೆ ಮಾಹಿತಿಯುಳ್ಳ ಸ್ಟಿಕರ್‌ ಹಚ್ಚುವುದು, ತೆಗೆಯುವುದು ಮಾಡಿ ಭಾವಚಿತ್ರ ತೆಗೆದುಕೊಂಡಿದ್ದಾರೆ. ಕಾಮಗಾರಿ ಮಾಡದೇ, ಮಾಡಲಾಗಿದೆ ಎನ್ನುವ ಫಲಕ ಹಾಕಿದ್ದಾರೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬಂದು ವಿವರಣೆ ನೀಡಬೇಕು ಎಂದು ಸಾವಳೇಶ್ವರ ಜೊತೆ ಧ್ವನಿಗೂಡಿಸಿದ ಹಿರಿಯ ಮುಖಂಡ ಭೀಮರಾವ್‌ ಢಗೆ, ಗುಣಮಂತ ಢಗೆ, ನಾಗಪ್ಪ ಅಲ್ದಿ, ಚಂದ್ರಕಾಂತ ಆಳಂಗೆ, ಸಂಜುಕುಮಾರ ಚಂಗಳೆ, ಶ್ರೀಶೈಲ ವಾನೆಗಾಂವ, ಶ್ರೀಶೈಲ ಹೆಬಳಿ, ಶಾಮರಾವ್‌ ಹೆಬಳೆ ಇತರರು ಈ ಕುರಿತು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಖಜೂರಿಯಿಂದ ತಡೋಳಾ 2 ಕಿ.ಮೀ ರಸ್ತೆ 5 ಲಕ್ಷ ರೂ., ಖಜೂರಿಯಿಂದ ಬಬಲೇಶ್ವರ ರಸ್ತೆ ಅರ್ಧ ಕಿ.ಮೀ ರಸ್ತೆಗೆ 2.50ಲಕ್ಷ ರೂ., ಖಜೂರಿಯಿಂದ ಮಟಕಿ ರಸ್ತೆ 5-6 ಕಿ.ಮೀ ರಸ್ತೆಗೆ 5ಲಕ್ಷ ರೂ.ಗಳ ಫಲಕ ಹಾಕಿದ್ದಾರೆ. ಆದರೆ ಮಳೆಗಾಲದಲ್ಲಿ ರಸ್ತೆ ತೊಂದರೆ ಆಗುತ್ತಿದ್ದರಿಂದ ರೈತರು ಜಮೀನಿಗೆ ಅನುಸಾರ 2-3 ಸಾವಿರ ರೂ. ಚಂದಾಹಾಕಿ ಸಾಮೂಹಿಕವಾಗಿ ರಸ್ತೆ ಮಾಡಿಕೊಂಡಿದ್ದಾರೆ. ಆದರೆ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ನಾಮ ಫಲಕ ಹಾಕಿರುವುದು ಆಶ್ಚರ್ಯವಾಗಿದೆ ಎಂದಿದ್ದಾರೆ. ಈ ಕುರಿತು ಜಿಪಂ ಸಿಇಒ ಸೂಕ್ತ ತನಿಖೆ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಿತ ಮೇಲಧಿಕಾರಿಗಳಿಗೆ ಹಾಗೂ ಸಚಿವರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.