ರಾಜ್ಯದ ತಿದ್ದುಪಡಿ ಕಾಯ್ದೆ ವಾಪಸ್‌ ಆಗಲಿ


Team Udayavani, Nov 27, 2021, 10:17 AM IST

2act

ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಖಂಡಿಸಿ ದೇಶಾದ್ಯಂತ ರೈತರು ಕೈಗೊಂಡ ಹೋರಾಟಕ್ಕೆ ಗುರುವಾರ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ತಾಲೂಕಿನ ನಂದೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಸಂಯುಕ್ತ ಹೋರಾಟ-ಕರ್ನಾಟಕದ ಕರೆ ಮೇರೆಗೆ ಐಕ್ಯ ಹೋರಾಟ ಸಮಿತಿ ಮುಖಂಡರಾದ ಬಿ.ಆರ್‌.ಪಾಟೀಲ, ಆರ್‌ಕೆಎಸ್‌ ಸಂಘಟನೆ ರಾಜ್ಯ ಕಾರ್ಯದರ್ಶಿ ಎಚ್‌.ವಿ.ದಿವಾಕರ್‌ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಬಂಡಿ ಸಮೇತ ಜಮಾವಣೆಗೊಂಡ ರೈತ ಮುಖಂಡರು ರಸ್ತೆ ಮಧ್ಯೆ ಕುಳಿತು, ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಿದರು.

ರೈತ ವಿರೋಧಿಯಾಗಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಮಳೆ, ಚಳಿ, ಬಿಸಿಲು ಹಾಗೂ ಪಟಭದ್ರ ಹಿತಾಸಕ್ತಿಗಳ ಬೆದರಿಕೆಗಳನ್ನು ಲೆಕ್ಕಿಸದೇ ಲಕ್ಷಾಂತರ ರೈತರು ಹೋರಾಟ ಕೈಗೊಂಡಿದ್ದರು. ಇದರ ಭಾಗವಾಗಿ ದೇಶಾದ್ಯಂತ ವ್ಯಾಪಕವಾಗಿ ರೈತರು, ದಲಿತರು, ಕಾರ್ಮಿಕರನ್ನು ಹೋರಾಟ ನಡೆಸಿದ ಪರಿಣಾಮ ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದು ಹೋರಾಟಕ್ಕೆ ಸಂದ ದೊಡ್ಡ ವಿಜಯವಾಗಿದೆ ಎಂದು ಮುಖಂಡರು ಹೇಳಿದರು.

ಕರಾಳ ಮೂರು ಕೃಷಿ ಕಾಯ್ದೆಗಳ ವಾಪಸ್‌ ಘೋಷಣೆ ಮಾಡಿರುವ ಪ್ರಧಾನಿ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡುವ ಕಾನೂನು ರಚನೆ ಹಾಗೂ ವಿದ್ಯುತ್‌ ಕ್ಷೇತ್ರದ ಸಂಪೂರ್ಣ ಖಾಸಗೀಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್‌ ಮಸೂದೆ 2020ರ ವಾಪಸಾತಿ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.

ಅದೇ ರೀತಿ ರಾಜ್ಯ ಬಿಜೆಪಿ ಸರ್ಕಾರ ಕೂಡ ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ವೇಗವಾಗಿ ಜಾರಿ ಮಾಡುತ್ತಿದೆ. ಈ ಕಾಯ್ದೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಪಸ್‌ ಪಡೆಯುವ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಸಾರ್ವಜನಿಕ ಉದ್ಯಮಗಳ ಖಾಸಗೀಕರಣಕ್ಕೆ ತಡೆ ಹಾಕಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಸತತ ಮಳೆಯಿಂದ ಆಗಿರುವ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಮಹೇಶ ಎಸ್‌.ಬಿ., ಉಮಾಪತಿ ಮಾಲೀಪಾಟೀಲ, ನಾಗೇಂದ್ರಪ್ಪ ತಂಭೆ, ರಮೇಶ ರಾಗಿ, ಮಲ್ಲಣ್ಣಗೌಡ, ಎಸ್‌.ಆರ್‌.ಕೊಲ್ಲೂರು, ಶೌಕತ್‌ ಅಲಿ ಅಲೂರ, ಅರ್ಜುನ ಗೊಬ್ಬೂರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.