ಹೊಸ ಪಠ್ಯ ಹಿಂಪಡೆಯಲು ಜೈ ಕನ್ನಡಿಗರ ಸೇನೆ ಆಗ್ರಹ
Team Udayavani, Jun 18, 2022, 12:27 PM IST
ಕಲಬುರಗಿ: ರಾಜ್ಯ ಸರ್ಕಾರ ರೋಹಿತ್ ಚಕ್ರವರ್ತಿ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಮಾಡಿ ವಿತರಿಸಲು ಮುಂದಾಗಿರುವ ಪುಸ್ತಕಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜೈ ಕನ್ನಡಿಗರ ಸೇನೆ ಸದಸ್ಯರು ಪ್ರತಿಭಟನೆ ಮಾಡಿದರು.
ಸರ್ಕಾರ ಕೈಗೊಂಡಿರುವ ನಿರ್ಧಾರದಿಂದ ಮಕ್ಕಳ ಭವಿಷ್ಯ ತಪ್ಪಾಗಿ ರೂಪುಗೊಳ್ಳುವ ಆತಂಕ ಹೆಚ್ಚಿದೆ. ಆದ್ದರಿಂದ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಸರ್ಕಾರ ಪಠ್ಯಪುಸ್ತಕವನ್ನು ಕೇಸರಿಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಘೋಷಣೆ ಕೂಗಿದರು.
ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಹಲವು ಮಹನೀಯರ ಇತಿಹಾಸವನ್ನು ತಿರುಚಿ ತಪ್ಪು ಸಂದೇಶವನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕೂಡಲೇ ಹೊಸ ಮುದ್ರಿತ ಪಠ್ಯ ಪುಸ್ತಕಗಳನ್ನು ಹಿಂದಕ್ಕೆ ಪಡೆಯಬೇಕು. ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಜಗನ್ನಾಥ ಸೂರ್ಯವಂಶಿ, ರಾಮಾ ಪೂಜಾರಿ, ವಿಠಲ ಪೂಜಾರಿ, ಧರ್ಮಸಿಂಗ್ ತಿವಾರಿ, ಬಾಬುರಾವ್, ಕವಿರಾಜ, ಚೇತನ, ಸುರೇಶ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.