ಅಳ್ಳಗಿ ಮುಖ್ಯ ಕಾಲುವೆಗೆ ಶಾಸಕ ಪಾಟೀಲ್ ಭೇಟಿ
Team Udayavani, Jan 25, 2022, 11:51 AM IST
ಅಫಜಲಪುರ: ತಾಲೂಕಿನ ಅಳ್ಳಗಿ(ಬಿ) ಮುಖ್ಯ ಕಾಲುವೆಗೆ ಶಾಸಕ ಎಂ.ವೈ. ಪಾಟೀಲ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಗರಂ ಆದ ಘಟನೆ ಜರುಗಿದೆ.
ಅಳ್ಳಗಿ ಮುಖ್ಯ ಕಾಲುವೆಗೆ ಭೇಟಿ ನೀಡಿ ಮಾತನಾಡಿದ ಅವರು, ಭೀಮಾ ಏತ ನೀರಾವರಿ ಯೋಜನೆಗೆ ಆರಂಭದಲ್ಲಿ 80 ಕೋಟಿ ರೂ. ಮೀಸಲಿಡಲಾಗಿತ್ತು. ಅದು ಪೂರ್ತಿಯಾಗುವ ಹೊತ್ತಿಗೆ 900 ಕೋಟಿ ರೂ.ಖರ್ಚಾಗಿದೆ. ಇಷ್ಟು ದೊಡ್ಡ ಮೊತ್ತ ಖರ್ಚಾದರೂ ಕೂಡ ನಮ್ಮ ರೈತರ ಹೊಲಗಳಿಗೆ ಸಮರ್ಪಕವಾಗಿ ನೀರು ಹರಿದಿಲ್ಲ ಎನ್ನುವುದು ಬಹಳ ನೋವಿನ ಸಂಗತಿಯಾಗಿದೆ. ಈ ಅದ್ವಾನಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಕಿಡಿ ಕಾರಿದರು.
ಭೀಮಾ ನದಿ ನಮ್ಮ ಜೀವನದಿಯಾಗಿದೆ, ರೈತರು ನದಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಯೋಜನೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಲು ಅನುದಾನ ನೀಡಬೇಕು, ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಕೆಲಸ ಮಾಡಬೇಕು. ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಪರಿಹಾರ ಕೊಟ್ಟಿಲ್ಲ, ಶೀಘ್ರವೇ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ಪೂಜಾರಿ ಉಡಚಾಣ, ಶರಣು ಕುಂಬಾರ, ಬಸವರಾಜ ಪಾಟೀಲ್, ಎಇಇ ಮಲ್ಲಿಕಾರ್ಜುನ ಜಾಕಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.