ಎಂಎಲ್‌ಸಿ ಚುನಾವಣೆ ಮುಂದೂಡಲು ಒತ್ತಾಯ
Team Udayavani, Nov 12, 2021, 9:46 AM IST
ಕಲಬುರಗಿ: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯರಿಲ್ಲದೇ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ರಾಜ್ಯ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಯನ್ನು ಮುಂದೂಡುವಂತೆ ಮಾಜಿ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ನಮ್ಮ ದೇಶದ ಸಂವಿಧಾನದ ಅನುಚ್ಛೇದ 73 ಹಾಗೂ 74ನೇ ವಿಧಿಗೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್‌ಗಳನ್ನು ಮಾಡುವ ಮೂಲಕ ಅಧಿಕಾರ ವಿಕೇಂದ್ರೀಕರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಸ್ಥಳೀಯ ಮಟ್ಟದಲ್ಲಿ ಪುಟ್ಟ ಸರ್ಕಾರಗಳಂತೆ ಕಾರ್ಯನಿರ್ವಹಿಸಲು ಅನು ವಾಗುವಂತೆ ಈ ಸ್ವತಂತ್ರ ಸಂಸ್ಥೆಗಳನ್ನು ಹುಟ್ಟುಹಾಕಲಾಗಿದ್ದು, ಅದರನ್ವಯ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸುತ್ತಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯ್ತಿಗಳ ಅಧಿಕಾರಾವಧಿ ಮುಗಿದು ಹೋಗಿದೆ. ಹೀಗಾಗಿ ಯಾವುದೇ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ತಮ್ಮ ಹಕ್ಕು ಚಲಾಯಿಸುವಂತಿಲ್ಲ, ಮೇಲಾಗಿ ರಾಜ್ಯ ಸರ್ಕಾರ ಬರಿ ಹೆಸರು ಮಾತ್ರಕ್ಕೆ ಕ್ಷೇತ್ರ ಪುನರ್ವಿಂಗಡಣೆ ಆಯೋಗ ರಚಿಸಿದೆ, ಇಲ್ಲಿಯವರೆಗೂ ಯಾವುದೇ ಸಭೆ ನಡೆಸಿಲ್ಲ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಚುನಾವಣೆ ಆಯೋಗ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಒಟ್ಟಾರೆ ಅಧಿಕಾರ ವಿಕೇಂದ್ರೀಕರಣಕ್ಕೆ ಪೆಟ್ಟು ನೀಡಿ ಚುನಾವಣೆ ನಡೆಸುವುದು ಎಷ್ಟೊಂದು ಸಮಂಜಸ ಎಂದು ಪ್ರಶ್ನಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಪ್ರಮುಖವಾಗಿ ಮತದಾನ ಮಾಡಬೇಕಾಗಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಿಗೆ ಚುನಾವಣೆಯೇ ನಡೆಸಿಲ್ಲ, ಏತನ್ಮಧ್ಯೆ ಚುನಾವಣೆ ಆಯೋಗ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಘೋಷಣೆ ಮಾಡಿರುವುದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಸದಸ್ಯರ ಮತದಾನದ ಮೂಲ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಮೇಲಾಗಿ ಈ ನಡೆ ಅಧಿಕಾರ ವಿಕೇಂದ್ರೀಕರಣದ ವಿರುದ್ಧವಾಗಿದೆ. ಆದ್ದರಿಂದ ಚುನಾವಣಾ ಆಯೋಗ ಮೌಲ್ವಿಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಮುಗಿಯುವ ವರೆಗೂ ಈ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಮುಂದೂಡಬೇಕೆಂದು ಬಿಆರ್ ಆಗ್ರಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.