ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದ ಸಂಸದ ಜಾಧವ
Team Udayavani, Jun 13, 2022, 12:25 PM IST
ಕಲಬುರಗಿ: ಸಮಾವೇಶವೊಂದರಲ್ಲಿ ಭಾಗವಹಿಸಲು ಹೊರಟಿದ್ದಾಗ ಮಾರ್ಗ ಮಧ್ಯೆ ಶಹಾಬಾದ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದನ್ನು ಕಂಡ ಸಂಸದ ಡಾ| ಉಮೇಶ ಜಾಧವ, ಖುದ್ದು ತಮ್ಮ ಕಾರಿನಲ್ಲಿ ಮಹಿಳೆಯನ್ನು ಜಿಮ್ಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ ಘಟನೆ ರವಿವಾರ ನಡೆದಿದೆ.
ಈ ಎಲ್ಲ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಜನಪರ ಕಾರ್ಯಗಳು ಲೋಕಸಭೆಯಲ್ಲೂ ಕಾಣಿಸಲಿ ಎಂದು ಸಲಹೆ ನೀಡಿದ್ದಾರೆ.
ರವಿವಾರ ಬೆಳಗ್ಗೆ ನಾಲವಾರದಲ್ಲಿ ನಡೆಯುವ ಸಮಾವೇಶಕ್ಕೆ ಸಂಸದರು ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಶಹಾಬಾದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ರಕ್ತ ಸುರಿಯುತ್ತಿತ್ತು. ಇದನ್ನು ಗಮನಿಸಿದ ಸಂಸದರು ಕೂಡಲೇ ಕಾರಿನಿಂದ ಇಳಿದು ಮಹಿಳೆ ಸಹಾಯಕ್ಕೆ ಧಾವಿಸಿದರು. ಈ ವೇಳೆ ತಮ್ಮ ಕಾರಿನಲ್ಲೇ ಮಹಿಳೆಯನ್ನು ಕುಳ್ಳಿರಿಸಿಕೊಂಡು ನಗರ ಜಿಮ್ಸ್ ಆಸ್ಪತ್ರೆಗೆ ಕರೆತಂದರು. ಅಲ್ಲದೇ, ತಾವೇ ಆಪರೇಷನ್ ಕೊಠಡಿಯಲ್ಲಿ ನಿಂತು ಚಿಕಿತ್ಸೆ ಕೊಡಿಸಿದರಲ್ಲದೇ, ಸ್ವಯಂ ವೈದ್ಯರಾಗಿರುವ ಅವರು ಗೌನ್ ತೊಟ್ಟು ಚಿಕಿತ್ಸೆಗೆ ಸಹಾಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್ ಸುತ್ತ ಸ್ವಚ್ಛತೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.