ಹೊಸ ವರ್ಷ: ಪ್ರಮುಖ ಸ್ಥಳ ಪರಿಶೀಲನೆ
Team Udayavani, Dec 31, 2021, 10:37 AM IST
ಕಲಬುರಗಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಬುಧವಾರ ಪೊಲೀಸರು ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.
ನಗರದ ರೈಲು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ದಟ್ಟಣೆ ಪ್ರದೇಶಗಳಲ್ಲಿ ವಸ್ತುಗಳು ಮತ್ತು ವಾಹನಗಳನ್ನು ತಪಾಸಣೆ ಮಾಡಿದರು. ಈ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಕಂಡ ವ್ಯಕ್ತಿಗಳನ್ನು ಪೊಲೀಸರು ತಪಾಸಣೆಗೆ ಒಳಪಡಿಸಿದರು.
ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಬಹುತೇಕವಾಗಿ ಮನೆಗಳಲ್ಲೇ ವರ್ಷಾಚರಣೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಡಾ| ವೈ.ಎಸ್. ರವಿಕುಮಾರ ಹೇಳಿದ್ದಾರೆ.
ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎಲ್ಲ ರೀತಿಯ ಹೋಟೆಲ್ ಮತ್ತು ಇತರೆ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರಾತ್ರಿ ಕರ್ಫ್ಯೂ ಜಾರಿಯಾಗಿದ್ದರಿಂದ ಹೊರ ಹೊರಡುವ ಸಂದರ್ಭದಲ್ಲಿ ಅತ್ಯಂತ ಕಡಿಮೆ ಜನರೊಂದಿಗೆ ವಾಹನದಲ್ಲಿ ಪ್ರಯಾಣಿಸುವುದು, ಗುರುತಿನ ಚೀಟಿ ಇಟ್ಟುಕೊಳ್ಳುವುದು. ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಮತ್ತು ತೆರೆದ ಸ್ಥಳಗಳಲ್ಲಿ ಗುಂಪುಗೂಡಿ ವರ್ಷ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
ಮನೆಯ ಹೊರಗೆ ಬಂದಂತಹ ಸಾರ್ವಜನಿಕರು ಕಡ್ಡಾಯವಾಗಿ ರಾತ್ರಿ 10 ಗಂಟೆ ಒಳಗೆ ವಾಪಸ್ ಆಗಬೇಕು. ತುರ್ತು ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸುಡುವಂತಿಲ್ಲ. ಅಲ್ಲದೇ, ರಾತ್ರಿ ಗಸ್ತಿನಲ್ಲಿರುವ ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದಷ್ಟು ಸಾರ್ವಜನಿಕರು ತಮ್ಮ ಮನೆಗಳಲ್ಲೇ ವರ್ಷಾಚರಣೆ ಮಾಡಬೇಕು. ರಾತ್ರಿ ಕರ್ಫ್ಯೂ ಜಾರಿಯಾಗಿದ್ದರಿಂದ ರಾತ್ರಿ 10 ಗಂಟೆ ನಂತರ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. -ಡಾ| ವೈ.ಎಸ್.ರವಿಕುಮಾರ, ನಗರ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.