ಕಾನೂನು ಅರಿವಿನಿಂದ ಸಮಾಜದಲ್ಲಿ ಶಾಂತಿ: ಹಳ್ಳೂರ್
Team Udayavani, Feb 10, 2022, 11:17 AM IST
ಶಹಾಬಾದ: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ನಗರ ಪೊಲೀಸ್ ಠಾಣೆ ಪಿಐ ಸಂತೋಷ ಡಿ.ಹಳ್ಳೂರ್ ಹೇಳಿದರು.
ಹೊನಗುಂಟಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಸರಿಯಾದ ಕಾನೂನಿನ ಮಾಹಿತಿ ನೀಡಿದರೇ ದೊಡ್ಡವರಾಗಿ ಕಾನೂನಿನ ಪಾಲನೆ ಮಾಡುತ್ತಾರೆ ಎಂದರು.
ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಜವಾಬ್ದಾರಿ, ಕಾನೂನಿನ ಅರಿವು ಹೊಂದಬೇಕು. ಎಲ್ಲರಿಗೂ ಕಾನೂನುಗಳ ಅರಿವು ಅಗತ್ಯವಿದೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಕಾನೂನು ಅರಿವು ಹೊಂದಿದ್ದಲ್ಲಿ ಕಾನೂನಾತ್ಮಕವಾಗಿ ಉಂಟಾಗುವ ಅನೇಕ ಸಮಸ್ಯೆಗಳು, ತೊಡಕುಗಳು ಇಲ್ಲವಾಗುತ್ತವೆ. ಕಾನೂನಿನ ತಿಳಿವಳಿಕೆ ಜಾಗೃತಗೊಳಿಸಿ ಅಪರಾಧ ಮಾಡದಂತೆ ಎಚ್ಚರಿಸುತ್ತದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳು ಮಾತ್ರವಲ್ಲ. ನಗರ ಪ್ರದೇಶಗಳಲ್ಲಿಯೂ ಕಾನೂನು ತಿಳಿವಳಿಕೆ ಕೊರತೆ ಎದ್ದು ಕಾಣುತ್ತಿದೆ. ಗ್ರಾಮೀಣ ಪ್ರದೇಶದ ಜನರು, ಅದರಲ್ಲೂ ಮಹಿಳೆಯರು, ವೃದ್ಧರು ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಅವಕಾಶಗಳಿಂದ ವಂಚಿತರಾಗಿ ಕಟ್ಟಕಡೆ ಯಲ್ಲಿ ಬದುಕುತ್ತಿರುವ ಜನರನ್ನು ಮೇಲೆತ್ತಲು ಕಾನೂನು ಅವಶ್ಯಕತೆ ಇದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ದತ್ತಾತ್ರೇಯ ಕುಲಕರ್ಣಿ ಮಾತನಾಡಿ, ಎಲ್ಲರೂ ಆತ್ಮಗೌರವದಿಂದ ಬದುಕು ನಡೆಸಲು ಸಂವಿಧಾನ ಅವಕಾಶ ನೀಡಿದೆ. ಸಮಾಜದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಕಾನೂನಿನ ಅರಿವಿರಬೇಕೆಂಬ ಮಹತ್ವದ ಆಶಯ ಹೊಂದಿ ಕಾನೂನು ಅರಿವು ಕಾರ್ಯಕ್ರಮವನ್ನು ಶಾಲೆಯಲ್ಲಿ ನಡೆಸಲಾಗುತ್ತಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಕೋಲೆ, ವೆಂಕಟೇಶ ಚಿನ್ನೂರ್, ಪೂಜಪ್ಪ ಮೇತ್ರೆ, ಶಿವಲೀಲಾ ಸುಣಗಾರ, ಅರುಣ ಸುಲದವರಮ್ ಎಂ. ಅನಿತಾ, ಮಂಗಲಾ, ಸಾಯಬಣ್ಣ, ಪೊಲೀಸ್ ಸಿಬ್ಬಂದಿ ಹುಸೇನ್ ಪಾಷಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.