ಪ್ರಾಯೋಗಿಕ ಬೋಧನೆ ಪರಿಣಾಮಕಾರಿ
Team Udayavani, Jan 24, 2022, 12:31 PM IST
ಜೇವರ್ಗಿ: ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಸೈದ್ಧಾಂತಿಕವಾಗಿ ಬೋಧಿಸಿದರೆ ಸಾಲದು, ಪ್ರಾಯೋಗಿಕ ಜ್ಞಾನವೂ ಅವಶ್ಯಕವಾಗಿದೆ ಎಂದು ಪ್ರಾಚಾರ್ಯ ಮೊಹಮ್ಮದ್ ಅಲ್ಲಾವುದ್ದೀನ್ ಸಾಗರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿಯಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಭೌತಶಾಸ್ತ್ರ ವಿಷಯದ ಪ್ರಾಯೋಗಿಕ ತರಗತಿಗನ್ನು ವೀಕ್ಷಿಸಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿಜ್ಞಾನ ಕ್ಷೇತ್ರದಲ್ಲಿ ಪ್ರಯೋಗಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ. ತರಗತಿಯಲ್ಲಿ ಅಧ್ಯಯನ ಮಾಡಿದ ವಿಷಯವನ್ನು ಪ್ರಾಯೋಗಿಕವಾಗಿ ಒಳಪಡಿಸಿ ಮೌಲ್ಯಮಾಪನ ಮಾಡಲಾಗುತ್ತದೆ. ಪ್ರಯೋಗಾಲಯಗಳು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಸೃಜನಶೀಲತೆ, ಕೌಶಲ್ಯ ಬೆಳೆಸುತ್ತವೆ. ವಿಷಯದ ಪರಿಕಲ್ಪನೆಯನ್ನು ಸರಳವಾಗಿ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಭೌತಶಾಸ್ತ್ರ ಉಪನ್ಯಾಸಕ ಶಂಕ್ರೆಪ್ಪ ಹೊಸದೊಡ್ಡಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಥಮ ದರ್ಜೆ ಸಹಾಯಕ ನೇಸರ ಎಂ. ಬೀಳಗಿ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.