ರಮೇಶಕುಮಾರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Dec 19, 2021, 10:24 AM IST
ಜೇವರ್ಗಿ: ಮಾಜಿ ಸ್ಪೀಕರ್, ಶಾಸಕ ರಮೇಶಕುಮಾರ ಮಹಿಳೆಯರ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ತಾಲೂಕು ಘಟಕದ ವತಿಯಿಂದ ಶನಿವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶಕುಮಾರ ಅವರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಮಸ್ತ ಮಹಿಳಾ ವರ್ಗಕ್ಕೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಮೋರ್ಚಾ ತಾಲೂಕು ಘಟಕದ ಅಧ್ಯಕ್ಷೆ ಹಳ್ಳೆಮ್ಮಗೌಡ್ತಿ ಮಲ್ಲಾಬಾದ, ತಾಲೂಕು ಪಂಚಾಯಿತಿ ಮಾಜಿ ಅದ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ಅಕ್ಕಮಹಾದೇವಿ ನೆಲೋಗಿ, ಸುಮಿತ್ರಾ ರಾಠೊಡ, ಜಗದೇವಿ ಪಾಟೀಲ, ಪರಮೇಶ್ವರ ಬಿರಾಳ, ರಾಮಚಂದ್ರ ಧರೇನ್ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.