ತಹಶೀಲ್ದಾರ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Feb 15, 2022, 12:53 PM IST
ಚಿತ್ತಾಪುರ: ಹುಮನಾಬಾದ್ ತಹಶೀಲ್ದಾರ್ ಅವರ ಮೇಲೆ ನಡೆದ ಘಟನೆ ಖಂಡಿಸಿ ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಲ್ಲೆ ಮಾಡಿದ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಅಂಕುಶ ಗೋಖಲೆ ಸೇರಿ 14 ಜನರನ್ನು ಗುಂಡಾ ಕಾಯ್ದೆಯಡಿ ಬಂ ಧಿಸಿ ಗಡಿಪಾರು ಮಾಡಬೇಕು. ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಗೆ ಸಲ್ಲಿಸಲಾಯಿತು.
ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಮಾತನಾಡಿ, ತಹಶೀಲ್ದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಚೇರಿಯ ಪಿಠೊಪಕರಣ ಒಡೆದು ಹಾಕಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ, ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ, ಚಂದ್ರಶೇಖರ ಅವಂಟಿ, ಸೋಮಶೇಖರ ಬೆಳಗುಂಪ್ಪಾ, ರಮೇಶ ಮರಗೋಳ, ವೀರಣ್ಣಗೌಡ ಪರಸರೆಡ್ಡಿ, ನಾಗರೆಡ್ಡಿ ಗೋಪಸೇನ್, ವೀರಣ್ಣ ಸುಲ್ತಾನಪುರ, ನಾಗರಾಜ ರೇಶ್ಮಿ, ಜಗದೇವ ದಿಗ್ಗಾಂವಕರ್, ಅಂಬರೀಶ ಸುಲೇಗಾಂವ, ಶರಣಗೌಡ ಭೀಮನಳ್ಳಿ, ವಿಶ್ವನಾಥ ಪಾಟೀಲ್, ರವಿ ಇವಣಿ, ರವೀಂದ್ರ ಸಜ್ಜನಶೆಟ್ಟಿ, ಮಲ್ಲಿಕಾರ್ಜುನರೆಡ್ಡಿ ಇಜಾರ್, ಪ್ರಸಾದ ಅವಂಟಿ, ಆನಂದ ನರಿಬೋಳ, ಮಂಜುಗೌಡ, ಸೋಮು ನಾಲವಾರ, ಕೋಟೇಶ್ವರ ರೇಶ್ಮಿ, ಸಿದ್ದು ಸಾತನೂರ, ರಾಚಣ್ಣ ಬೊಮ್ಮನಳ್ಳಿ, ಶಂಭು ದಿಗ್ಗಾಂವ, ರಮೇಶ ಕಾಳನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.