9ರಂದು ನಿಂಬರಗಾದಲ್ಲಿ ಪ್ರತಿಭಟನೆ
Team Udayavani, Feb 7, 2022, 1:26 PM IST
ಆಳಂದ: ಕಳೆದ ಜ.26ರಂದು ಆಚರಿಸಿದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಆಳಂದ ನ್ಯಾಯಾಧೀಶರು ಸೇರಿದಂತೆ ಕೆಲವೆಡೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆ ಖಂಡಿಸಿ ನಿಂಬರಗಾದಲ್ಲಿ ಫೆ. 9ರಂದು ಪ್ರತಿಭಟನೆ ನಡೆಯಲಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡ ದತ್ರಾತ್ರೇಯ ಕುಡಕಿ ಹೇಳಿದರು.
ದಲಿತ ಮತ್ತು ಪ್ರಗತಿಪರ ಸಂಘಟಗಳ ಒಕ್ಕೂಟದ ಆಶ್ರಯದಲ್ಲಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ರಾಯಚೂರು ನ್ಯಾಯಾಧಿಧೀಶರು ಹಾಗೂ ಆಳಂದ ನ್ಯಾಯಾಧೀಶರು ಹಾಗೂ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಡೆಗಣಿಸಿದ್ದಕ್ಕಾಗಿ ಗ್ರಾಮದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಮುಖಂಡ ವಿಠ್ಠಲ ಕೋಣೆಕರ್ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಲಯ ಮಟ್ಟದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಬಂಜಾರಾ ಕ್ರಾಂತಿದಳದ ರಾಜ್ಯಾಧ್ಯಕ್ಷ ರಾಜು ಚವ್ಹಾಣ, ವಿಠ್ಠಲ ಕೋಣೆಕರ್, ರಾಜು ಸಿಂಗೆ, ಸಿದ್ಧರಾಮ ಅಷ್ಟಗಿ, ಸೂರ್ಯಕಾಂತ ಜಿಡಗಿ, ವಿಜಯಕುಮಾರ ಚಿಂಚೊಳ್ಳಿ, ಪ್ರಕಾಶ ಸರ್ವೋದಯ, ಸಿದ್ಧರಾಮ ಹಾದಿಮನಿ, ಮಹಾಂತೇಶ ಜಿಡಗಿ, ಶರಣಬಸಪ್ಪ ನಿರ್ಮಲಕರ್, ರೇವಣಸಿದ್ಧ ಖರ್ಚನ, ಆನಂದ ಗುಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.