ಆಹಾರ ಧಾನ್ಯ-ಬೀಜ ವ್ಯಾಪಾರಿಗಳಿಂದ ಪ್ರತಿಭಟನೆ
Team Udayavani, Jun 2, 2022, 2:47 PM IST
ಕಲಬುರಗಿ: ಇಲ್ಲಿನ ಎಪಿಎಂಸಿ ಕಚೇರಿ ಅಧೀಕ್ಷಕ ಮಾಹಾಂತಪ್ಪ ವರ್ಗಾವಣೆಗೆ ಆಗ್ರಹಿಸಿ ಬುಧವಾರ ಎಪಿಎಂಸಿ ವ್ಯಾಪಾರ ವಹಿವಾಟು ಬಂದ್ ಮಾಡಿ ವರ್ತಕರು ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ವಿಚಾರಣೆ ಆಗಮಿಸಿದ್ದ ಕಾರಟಗಿ ಎಪಿಎಂಸಿ ಕಾರ್ಯದರ್ಶಿ, ಹೆಚ್ಚುವರಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಮಹಾಂತಪ್ಪ ವರ್ತನೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಎಪಿಎಂಸಿಗೆ ಬರುವ ಎಲ್ಲ ವರ್ತಕರು, ರೈತರು ಸೇರಿಕೊಂಡು ಇತರೆ ಸಾಮಾನ್ಯರಿಗೂ ಏಕವಚನದಲ್ಲಿ ಮಾತನಾಡಿಸುವುದು, ಸಮಸ್ಯೆ ಎಂದು ಬಂದವರನ್ನು ಇನ್ನಷ್ಟು ಸಮಸ್ಯೆಗೆ ಗುರಿ ಮಾಡುವುದು, ನೊಂದವರ ಗೋಳು ಕೇಳುವುದನ್ನು ಬಿಟ್ಟು ಬೇಕಾಬಿಟ್ಟಿ ಮಾತನಾಡಿ ಅಹಂಕಾರ ತೋರಿಸುವುದನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಎರಡು ಬಾರಿ ಕಾರ್ಯದರ್ಶಿ ಮತ್ತು ಇತರೆ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರೂ, ನಮ್ಮ ಕಾರ್ಯದರ್ಶಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಕೂಡಲೇ ಮಹಾಂತಪ್ಪ ಅವರನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ವಿಶೇಷ ಅಧಿಕಾರಿಯಾಗಿ ವಿಚಾರಣೆ ಮಾಡಲು ಬಂದಿರುವ ಕಾರಟಗಿ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿ, ಸಮಸ್ಯೆ ಕುರಿತು ಮಾಹಿತಿ ನೀಡಲಾಯಿತು. ಬಳಿಕ ಆಡಳಿತ ಕಚೇರಿ ಎದುರು ಘೋಷಣೆ ಕೂಗಿ ಪ್ರತಿಭಟಿಸಲಾಯಿತು.
ಸಂಘದ ಅಧ್ಯಕ್ಷ ಶ್ರೀಮಂತ ಉದನೂರು, ಕಾರ್ಯದರ್ಶಿ ಸಂತೋಷ ಜಿ.ಲಂಗರ್, ಎಚ್‌ಕೆಸಿಸಿಐನ ಶಶಿಕಾಂತ ಪಾಟೀಲ, ಶರಣು ಪಪ್ಪಾ, ಬಸವರಾಜ ಮಂಗಲಗಿ, ಅಂಬರಾಯ ಜೀವಣಗಿ, ಶಿವಲಿಂಗಪ್ಪ ಪಾಟೀಲ ಭೀಮು ಜೀವಣಗಿ, ಹಮಾಲರ ಸಂಘದ ಅಧ್ಯಕ್ಷ ಆಪ್ಪರಾವ್, ಸಂಗಣ್ಣ ಹಿರೇಗೌಡ, ಸಂತೋಷ, ಅಶೋಕ ನಿಂಗದೆ, ಸಂತೋಷ ನಿಂಗದೆ, ಶಿವಪುತ್ರಪ್ಪ ಪೂಜಾರಿ, ಮಲ್ಲಿಕಾರ್ಜುನ ಪೂಜಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.