ಆಸ್ಸಾಂ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ
Team Udayavani, Feb 14, 2022, 12:00 PM IST
ಕಲಬುರಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಆಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಬ್ಬರ ಬಗ್ಗೆ ಕೀಳಾಗಿ ಮಾತನಾಡುವುದು ಬಿಜೆಪಿ ಸಂಸ್ಕೃತಿಯಾಗಿದೆ. ಹಿಮಂತ್ ಬಿಸ್ವಾ ಶರ್ಮಾ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಬಗ್ಗೆ ಇಲ್ಲ-ಸಲ್ಲದ ಹೇಳಿಕೆ ನೀಡಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇಂತಹ ಮನಸ್ಥಿತಿ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಮುಖಂಡರಾದ ಈರಣ್ಣ ಝಳಕಿ, ಅಮರ ಶಿರವಾಳ, ಪರಶುರಾಮ ನಾಟೀಕಾರ, ಶಕೀಲ ಸರಡಗಿ, ಅಸ್ಲಾಂ ಪಾಷಾ, ಗೋವಿಂದ ಚವ್ಹಾಣ, ಹಣಮಂತ ಚೂರಿ, ಲಕ್ಕಪ್ಪ ಜವಳಿ, ಗೀತಾ, ಸಂಗೀತಾ, ಮಂಜುಳಾ ಪಾಟೀಲ, ಕುಮಾರ ವಠಾuರ, ಶರಣು ಗೌರೆ, ಮಂಜು ಸಿ.ಕೆ., ಶರಣು ಫರತಾಬಾದ, ಸುರೇಶ ರೆಡ್ಡಿ, ಅನೀಲ ಕಪನೂರ, ಸಾಗರ, ಸುರೇಶ, ಮಹೇಶ ವಟವಟಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.