ಬಂಧಿತ ರೈತರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 25, 2022, 12:49 PM IST
ಕಲಬುರಗಿ: ಚಿತ್ತಾಪುರ ಓರಿಯಂಟ್ ಸಿಮೆಂಟ್ ಕಾರ್ಖಾನೆ ಎದುರು ಧರಣಿ ಮಾಡುತ್ತಿದ್ದ ರೈತರನ್ನು ಬಂಧಿಸಿರುವುದನ್ನು ಖಂಡಿಸಿರುವ ಸಿಪಿಐ(ಎಂ) ಮುಖಂಡರು ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು, ಕಾರ್ಖಾನೆಯಿಂದ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿ, ಓರಿಯಂಟ್ ಸಿಮೆಂಟ್ಸ್ 1750 ಎಕರೆ ಭೂಮಿ ಖರೀದಿ ಮಾಡಿದೆ. ಭೂಮಿಗೆ ಸರಿಯಾದ ಬೆಲೆ ನೀಡಿಲ್ಲ. ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ನೌಕರಿ ನೀಡಿಲ್ಲ. ಕಾರ್ಖಾನೆ ಧೂಳಿನಿಂದಾಗಿ ಹಲವಾರು ಎಕರೆ ಭೂಮಿಯಲ್ಲಿ ಬೆಳೆ ಹಾಳಾಗುತ್ತಿವೆ. ಇದಕ್ಕೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳು ಪ್ರತಿಭಟನೆಗಾರರನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇದು ಖಂಡನೀಯ. ಕೂಡಲೇ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ಬಂಧಿತರ ರೈತರು, ರೈತ ಮಹಿಳೆಯರನ್ನು ಬಿಡುಗಡೆ ಮಾಡಬೇಕು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನೀಲಾ, ಭೀಮ ಶೆಟ್ಟಿ ಯಂಪಳ್ಳಿ, ಮಲ್ಲಿಕಾರ್ಜುನ ಸಜ್ಜನ್, ಶ್ರೀಮಂತ ಬಿರಾದಾರ್, ಗೌರಮ್ಮ ಪಾಟೀಲ, ಶರಣಬಸಪ್ಪ ಮಮಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.