ಕರ್ನಾಟಕ ಪ್ರಾಂತ ರೈತ ಸಂಘದಿಂದ ಧರಣಿ
Team Udayavani, Apr 26, 2022, 12:30 PM IST
ಜೇವರ್ಗಿ: ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು, ತಕ್ಷಣ ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಸೋಮವಾರದಿಂದ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.
60 ವರ್ಷ ದಾಟಿದ ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ ಮಾಸಿಕ 7500ರೂ. ಮಾಸಾಶನ ಮಂಜೂರಿ ಮಾಡಬೇಕು. ಉದ್ಯೋಗ ಖಾತ್ರಿಯಲ್ಲಿ ಕೆಲಸದ ಸಮಯವನ್ನು ಬೆಳಗ್ಗೆ 7ರಿಂದ 11 ಗಂಟೆ ವರೆಗೆ ನಿಗದಿ ಮಾಡಬೇಕು. ಕೇಂದ್ರ ಸರ್ಕಾರ ನರೇಗಾ ಕೂಲಿಯನ್ನು ಇತ್ತೀಚೆಗೆ ಪರಿಷ್ಕೃರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಪ್ರಸ್ತುತ ನೀಡುತ್ತಿರುವ ಕೂಲಿ ಯಾವುದಕ್ಕೂ ಸಾಲುತ್ತಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನರೇಗಾ ಕೂಲಿಯನ್ನು 600ರೂ.ಗೆ ಹೆಚ್ಚಳ ಮಾಡಬೇಕು. ಪ್ರತಿಯೊಂದು ಕುಟುಂಬಕ್ಕೆ ಕನಿಷ್ಟ 200 ದಿನ ಕೆಲಸ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೆಲಸಗಾರರಿಗೆ ಅನೇಕ ಕಡೆ ಕೂಲಿ ಹಣ ಪಾವತಿ ಮಾಡಿಲ್ಲ. ಕೊರೊನಾದಂತ ಸಂಕಷ್ಟ ಸಮಯದಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕೂಲಿಕಾರ್ಮಿಕರಿಗೆ ಬಾಕಿ ಇರುವ ವೇತನ ಹಾಗೂ ಕೊರೊನಾ ಪರಿಹಾರ ತಕ್ಷಣ ನೀಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಕೆಲಸದ ಪ್ರಮಾಣ ಕಡಿಮೆ ಮಾಡಬೇಕು. ಈ ವರ್ಷ ಹಾಳಾಗಿರುವ ತೊಗರಿ, ಹತ್ತಿ ಬೆಳೆಗಳಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು, ಜೇವರ್ಗಿಯಿಂದ ಗೌನಳ್ಳಿ ವರೆಗಿನ ರಸ್ತೆ ಡಾಂಬರೀಕರಣ ಮಾಡಬೇಕು. ಜೇವರ್ಗಿಯಿಂದ ಶಹಾಪುರಕ್ಕೆ ತೆರಳುವ ರಾಜ್ಯ ಹೆದ್ದಾರಿ ದುರಸ್ತಿ ಮಾಡಬೇಕು. ಕೋಳಕೂರ ಗ್ರಾಮದಲ್ಲಿರುವ ಜೋಗಿಕೊಳ್ಳದ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಕಾರ್ಯದರ್ಶಿ ಪರಶುರಾಮ ಬಡಿಗೇರ, ಹಿರಿಯ ರೈತ ಮುಖಂಡ ವೆಂಕೋಬರಾವ್ ವಾಗಣಗೇರಾ, ಮಲಕಪ್ಪ ಮ್ಯಾಗೇರಿ ಹರನೂರ, ಶಂಕರಲಿಂಗ ರೇವನೂರ, ಶ್ರೀನಾಥ ಕೋಳಕೂರ, ಜೈಭೀಮ ಮುದಬಾಳ, ಮಲ್ಲಿಕಾರ್ಜುನ ವರ್ಚನಳ್ಳಿ, ಬಸವರಾಜ ಶಖಾಪುರ, ನಿಂಗಣ್ಣ ಯಾತನೂರ, ಮಹೇಶ ಬಳಬಟ್ಟಿ, ರಾಜು ಸಾಥಖೇಡ ರೇವನೂರ ಹಾಗೂ ರೈತ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.