ತ್ರಿಪುರಾ ಘಟನೆ ಖಂಡಿಸಿ ಪ್ರತಿಭಟನೆ
Team Udayavani, Nov 12, 2021, 10:42 AM IST
ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಆಡಳಿತ ಬಿಜೆಪಿ ಸರಕಾರದಲ್ಲಿ ಅಲ್ಪಸಂಖ್ಯಾತರ ಮುಸ್ಲಿಮರ ಸಮುದಾಯಗಳ ಮೇಲೆ ದೌರ್ಜನ್ಯ ಹಲ್ಲೆ ಆಸ್ತಿಹಾನಿ ಆಗುತ್ತಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಮುಸ್ಲಿಮ್ ಸಮುದಾಯಗಳ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಮುಸ್ಲಿಮ್ ಸಮಾಜದ ಹಿರಿಯ ಮುಖಂಡ ಎಂ.ಎ. ಖುದ್ದುಸ್ ಮಾತನಾಡಿ, ಕೇಂದ್ರ ಸರಕಾರ ತಮ್ಮ ವೈಫಲ್ಯತೆಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದೇಶದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದ ನಂತರ ಆರ್ಥಿಕ ಸಂಪೂರ್ಣ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ತ್ರಿಪುರ ರಾಜ್ಯದಲ್ಲಿ ಜಾತಿ ಧರ್ಮಗಳ ಮಧ್ಯೆ ಕೋಮುವಾದ ಗಲಭೆ ಸೃಷ್ಟಿಸುತ್ತಿದೆ. ಆಸ್ತಿಪಾಸ್ತಿ ಹಾನಿ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ, ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಗೋಪಾಲರಾವ ಕಟ್ಟಿಮನಿ, ಪುರಸಭೆ ಸದಸ್ಯ ಅಬ್ದುಲ್ ಬಾಸೀತ, ಮಾರುತಿ ಗಂಜಗಿರಿ, ಪುರಸಭೆ ಉಪಾಧ್ಯಕ್ಷ ಶಬ್ಬೀರ ಅಹೆಮದ, ಶೇಖ್‌ಫರೀದ್, ಶರಣ ಮೋತಕಪಳ್ಳಿ ಮಾತನಾಡಿದರು.
ಬಡಿದರ್ಗಾ ಸಜ್ಜಾದೇ ನಶಿನ್ ಅಕ್ಬರ ಹುಸೇನಿ ಸಾಹೇಬ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಸೂದ ಸೌದಾಗರ, ಮುಕ್ತಾರ, ಖಾಜಾಪಟೇಲ್ ಕೊಟಗಾ, ಹಸೇನ ಹಾಸ್ಮಿ, ಮಗದೂಮಖಾನ್, ಮಹ್ಮದ್ ಹಾದಿ, ಖಲೀಲ್ ಪಟೇಲ್, ಮತೀನ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.