ಬಿಜೆಪಿ ಮುಖಂಡರ ಪ್ರತಿಕೃತಿ ದಹಿಸಿ ಪ್ರತಿಭಟನೆ
Team Udayavani, Nov 12, 2021, 9:37 AM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗದ ನೇತೃತ್ವದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಸೇಡಂ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಟೌನ್ ಹಾಲ್‌ನವರೆಗೆ ಪ್ರತಿಭಟನಾ ಮರೆವಣಿಗೆ ನಡೆಸಿದ ಮುಖಂಡರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ, ಇಲ್ಲಿನ ಮುಖ್ಯ ರಸ್ತೆಯಲ್ಲಿ ಬಿಜೆಪಿ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸನಗೌಡ ಪಾಟೀಲ ಯತ್ನಾಳ ಮತ್ತು ಬಸವರಾಜ ಮತ್ತಿಮಡು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಬಗ್ಗೆ ಸಿದ್ದರಾಮಯ್ಯನವರು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಹೇಳಿಕೊಂಡು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಗೆ ಹೊಟ್ಟೆಪಾಡಿಗಾಗಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಇಡೀ ದಲಿತರ ಬಗ್ಗೆ ಹೇಳಿಕೆ ಕೊಟ್ಟಿಲ್ಲ. ಕೆಲವರನ್ನು ಉಲ್ಲಂಘಿಸಿ ಮಾತ್ರ ಹೇಳಿದ್ದಾರೆ. ಆದರೆ, ವಿನಾಕಾರಣ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ತೇಜೋವಧೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಸಿದ್ದರಾಮಯ್ಯ ಸಾಮಾಜಿಕ ನ್ಯಾಯಪರವಾಗಿದ್ದಾರೆ. ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಮುಖ್ಯಮಂತ್ರಿಗಳಾಗಿದ್ದಾಗ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಿದ್ದರು. ಇಂತಹವರು ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯ ನಾಯಕರಿಗೆ ನೈತಿಕತೆ ಇಲ್ಲ. ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂದು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ:ಒಂದು ಕಡೆ ಬಡತನ, ಇನ್ನೊಂದು ಕಡೆ ಕ್ರೀಡೆ: ಪ್ಯಾರಾ ಅಥ್ಲೀಟ್ ಗೆ ಕಾಡುತ್ತಿದೆ ಭವಿಷ್ಯದ ಚಿಂತೆ
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಸರ್ಕಾರಗಳು ಇದ್ದರೂ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಕೇವಲ ಇಲ್ಲ-ಸಲ್ಲದ ಹೇಳಿಕೆಗಳನ್ನು ಜನರನ್ನು ದಿಕ್ಕುತಪ್ಪಿಸುವ ಕೆಲಸದಲ್ಲಿ ಬಿಜೆಪಿಯವರು ತೊಡಗಿದ್ದಾರೆ. ಇನ್ಮುಂದೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ಬಿಜೆಪಿಯವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕೆಂದು ಪ್ರತಿಭಟನಾ ನಿರತರು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಸಂಗಾವಿ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಎಂ.ವೈ.ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಾನಂದ ಹೊನಗುಂಟಿ, ಮಹಿಳಾ ಘಟಕದ ಅಧ್ಯಕ್ಷೆ ಲತಾ ರವಿರಾಠೊಡ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಮುಖಂಡರಾದ ಸುಭಾಷ ರಾಠೊಡ್, ಭೀಮರಾಯ ತೇಗಲತಿಪ್ಪಿ, ಸೈಯದ್ ಮಹಿಮೂದ್ ಪಟೇಲ್, ಗಿರೀಶ ಬೋರೆ, ನೀಲಕಂಠರಾವ ಮೂಲಗೆ, ದೇವೇಂದ್ರಪ್ಪ ಮರತೂರ, ಮಹಾಂತೇಶ ಕೌಲಗಿ, ಅಂಬಾರಾಯ ಶೆಳ್ಳಗಿ, ವಾಣಿಶ್ರೀ ಸಗರಕರ್, ನಿರ್ಮಲಾ ಬರಗಾಲಿ, ರೇಣುಕಾ ಚವ್ಹಾಣ, ಗೀತಾ ಮಯದಗಲ, ಸಾಹೇರಾಬಾನು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.