ರಾಯಚೂರಲ್ಲಿ ಮತ್ತೆ 35 ಜನರಲ್ಲಿ ಸೋಂಕು ಪತ್ತೆ
ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡ ಮೂವರು ವಿವಿಧ ಭಾಗದಿಂದ 70 ವಲಸಿಗರ ಆಗಮನ
Team Udayavani, Jun 4, 2020, 11:49 AM IST
ರಾಯಚೂರು: ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರುತ್ತಲೇ ಸಾಗುತ್ತಿದ್ದು, ಬುಧವಾರ ಮತ್ತೆ 35 ಪ್ರಕರಣ ದೃಢಪಟ್ಟಿವೆ. ಅಲ್ಲಿಗೆ ಜಿಲ್ಲೆಯಲ್ಲಿ 268 ಜನರಿಗೆ ಸೋಂಕು ತಗುಲಿದಂತಾಗಿದೆ. 35 ಜನರಲ್ಲಿ 30 ಜನ ಮುಂಬೈನಿಂದ ಬಂದರವಾಗಿದ್ದು, ದೇವದುರ್ಗ ತಾಲೂಕಿನವರಾಗಿದ್ದಾರೆ. ಇನ್ನುಳಿದ ಐವರು ಸೋಂಕಿತರ ಸಂಪರ್ಕ ಹೊಂದಿದ್ದವರಿಗೆ ಪಾಸಿಟಿವ್ ಬಂದಿದೆ. ಇನ್ನೂ ಮಸ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ಗೆ ಒಳಪಟ್ಟಿದ್ದ ಮೂವರು ತಪ್ಪಿಸಿಕೊಂಡು ಹೋಗಿದ್ದಾರೆ. ಅವರ ವಿರುದ್ಧ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವದುರ್ಗ ತಾಲೂಕಿನಿಂದ 176, ಲಿಂಗಸುಗೂರು ತಾಲೂಕಿನಿಂದ 97, ಮಾನ್ವಿ ತಾಲೂಕಿನಿಂದ 38 ಮತ್ತು ರಾಯಚೂರು ತಾಲೂಕಿನಿಂದ 30 ಸೇರಿದಂತೆ ಬುಧವಾರ 341 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಫಲಿತಾಂಶಕ್ಕಾಗಿ ಕಳುಹಿಸಿದ್ದ ಫಲಿತಾಂಶಗಳಲ್ಲಿ ಬುಧವಾರ ಬಂದ ವರದಿಗಳಲ್ಲಿ 1,011 ನೆಗೆಟಿವ್ ಬಂದಿವೆ. ಜಿಲ್ಲೆಯಿಂದ ಈವರೆಗೆ 16,560 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 15,141 ವರದಿಗಳು ನೆಗೆಟಿವ್ ಬಂದರೆ, 1,145 ಮಾದರಿಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿ ಬುಧವಾರ 707 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
70 ವಲಸೆಗಾರರ ಆಗಮನ: ಮಹಾರಾಷ್ಟ್ರದಿಂದ ಮಂಗಳವಾರ ರಾತ್ರಿ ಬಂದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ 48 ಜನ, ತಿರುಪತಿ ನಿಜಾಮಬಾದ್ ರೈಲಿನ ಮೂಲಕ 26 ಹಾಗೂ ನಿಜಾಮಬಾದ್ ತಿರುಪತಿ ರೈಲಿನ ಮೂಲಕ 6 ಜನರು ಸೇರಿ 70 ವಲಸೆಗಾರರು ಆಗಮಿಸಿದ್ದಾರೆ. ರೈಲು ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ನಿಗದಿತ ಸಾಂಸ್ಥಿಕ ಕ್ವಾರಂಟೈನ್, ಗೃಹ ಕ್ವಾರಂಟೈನ್, ವಸತಿಗೃಹ ದಿಗ್ಭಂದನಕ್ಕೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.