ನಿನ್ನೆ ಮತ್ತೆರಡು ಮಂದಿಗೆ ಸೋಂಕು
Team Udayavani, Jun 6, 2020, 12:18 PM IST
ರಾಯಚೂರು: ಜಿಲ್ಲೆಯಲ್ಲಿ ಗುರುವಾರ 88 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದರೆ ಶುಕ್ರವಾರ ಕೇವಲ 2 ಮಾತ್ರ ಬಂದಿರುವುದು ಸಮಾಧಾನ ತಂದಿದೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ 358 ಪ್ರಕರಣ ದೃಢಪಟ್ಟಂತಾಗಿದೆ. ದೇವದುರ್ಗ ತಾಲೂಕು ಪಲಕನಮರಡಿ ಗ್ರಾಮದ 35 ವರ್ಷ ವ್ಯಕ್ತಿ (ಆರ್‌ಸಿಆರ್-357), ದೇವದುರ್ಗ ತಾಲೂಕು ಕರಡಿಗುಡ್ಡ ಗ್ರಾಮದ 24 ವರ್ಷ ಮಹಿಳೆಗೆ (ಆರ್‌ಸಿಆರ್- 358) ಸೋಂಕು ತಗುಲಿದ್ದು, ಇವರಿಬ್ಬರು ಮಹಾರಾಷ್ಟ್ರದಿಂದ ಬಂದಿದ್ದಾರೆ. 37 ಜನ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, 321 ಪ್ರಕರಣ ಸಕ್ರಿಯವಾಗಿವೆ.
ಇನ್ನೂ ಶುಕ್ರವಾರ ಲಿಂಗಸುಗೂರು ತಾಲೂಕಿನಿಂದ 58, ಮಾನ್ವಿ ತಾಲೂಕಿನಿಂದ 62, ಸಿಂಧನೂರು ತಾಲೂಕಿನಿಂದ 9 ಮತ್ತು ರಾಯಚೂರು ತಾಲೂಕಿನಿಂದ 22, ಎರಡು ಸಾರಿ ಸೇರಿ 151 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ -19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮೊದಲು ಕಳುಹಿಸಿದ ವರದಿಗಳಲ್ಲಿ 140 ನೆಗೆಟಿವ್ ಬಂದಿವೆ. ಈವರೆಗೆ 17,040 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಿದ್ದು, ಅದರಲ್ಲಿ 15645 ವರದಿಗಳು ನೆಗೆಟಿವ್ ಆಗಿವೆ. ಉಳಿದಂತೆ 885 ಮಾದರಿಗಳ ಫಲಿತಾಂಶ ಬರಬೇಕಿದೆ. μವರ್ ಕ್ಲಿನಿಕ್ ಗಳಲ್ಲಿ ಶುಕ್ರವಾರ 538 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ.
ಸಾಂಸ್ಥಿಕ ಕ್ವಾರಂಟೈನ್‌ಗಳಿಂದ 261 ಜನರನ್ನು ಬಿಡುಗಡೆ ಮಾಡಲಾಗಿದೆ. 14 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಂಟು ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು, ಅದರಲ್ಲಿ 15 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.