ಮುಖ್ಯಮಂತ್ರಿಗಳೊಂದಿಗೆ ಚರ್ಚೆಗೆ ಸಿದ್ದ
Team Udayavani, Dec 27, 2021, 12:49 PM IST
ಸೇಡಂ: ತಮ್ಮ ಅವಧಿಯಲ್ಲಿನ ಅಭಿವೃದ್ಧಿ ಕೆಲಸಗಳು ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ಪುರಸಭೆಯ ವಾರ್ಡ್ ನಂ. 13 ವೆಂಕಟೇಶ್ವರ ನಗರ ಉಪ ಚುನಾವಣೆ ಪ್ರಯುಕ್ತ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿನ ಕಾಮಗಾರಿಗಳು ಪಾರದರ್ಶಕವಾಗಿರಲಿ ಎನ್ನುವ ಉದ್ದೇಶದಿಂದಅವುಗಳನ್ನು ನಿರ್ಮಿತಿ ಕೇಂದ್ರದವರಿಗೆ ನೀಡಲಾಗಿತ್ತು. ಆದರೀಗ ಆ ಪರಿಸ್ಥಿತಿ ಈಗಿಲ್ಲ ಎಂದು ಆಪಾದಿಸಿದರು.
ತಾವು ಮಾಡಿದ ಅಭಿವೃದ್ಧಿ ಜನರಿಗೆ ತಿಳಿದಿದೆ. ಪಟ್ಟಣದ ರಂಗಮಂದಿರ, ಯುಜಿಡಿ ಕಾಮಗಾರಿ, ಕ್ರೀಡಾಂಗಣ, ಮಿನಿ ವಿಧಾನಸೌಧ, 24/7 ನೀರು ಸರಬರಾಜು, ರಿಂಗ್ ರೋಡ್, ವಿದ್ಯಾರ್ಥಿ ವಸತಿ ನಿಲಯ ಕಟ್ಟಡಗಳು, ಪ್ರಥಮ ದರ್ಜೆ ಕಾಲೇಜು ಕಟ್ಟಡ, ಬಸ್ ನಿಲ್ದಾಣ, 100 ಹಾಸಿಗೆಯ ಆಸ್ಪತ್ರೆ, ಮಳಖೇಡದ ಕಾಗಿಣಾ ಮೇಲ್ಸೇತುವೆ, ಕಾಗಿಣಾ-ಕಮಲಾವತಿಗೆ ಬ್ರಿಡ್ಜ್ಕಂ ಬ್ಯಾರೇಜ ಯಾರು ಮಾಡಿದ್ದು ಎಂದು ಪ್ರಶ್ನಿಸಿದರು.
ಮುಖಂಡರಾದ ಶಿವಾನಂದ ಪಾಟೀಲ, ಸತೀಶರೆಡ್ಡಿ ಪಾಟೀಲ ರಂಜೋಳ, ಸುಭಾಷ ರಾಠೊಡ, ಜಗನ್ನಾಥ ಚಿಂತಪಳ್ಳಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗೇಶ್ವರರಾವ್ ಮಾಲಿಪಾಟೀಲ, ಶರಣಪ್ಪ ಮೆಕ್ಯಾನಿಕ್ ಮಾತನಾಡಿದರು.
ಪುರಸಭೆಸದಸ್ಯ ಸಂತೋಷ ತಳವಾರ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಅಭ್ಯರ್ಥಿ ದೇವು ತಿಪ್ಪಣ್ಣ ದೊರೆ, ಯುವಘಟಕ ಅಧ್ಯಕ್ಷ ಭೀಮಾಶಂಕರ ಕೊಳ್ಳಿ, ನಾಗಣ್ಣ ತೊಟ್ನಳ್ಳಿ, ಅಬ್ದುಲ್ ಗಫೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.