![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 27, 2021, 12:44 PM IST
ಶಹಾಬಾದ: ಸಂವಿಧಾನದ ಆಶೋತ್ತರ, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆಯಬೇಕಿದೆ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು. ಶುಕ್ರವಾರ ನಗರಸಭೆಯಿಂದ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಡಾ| ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು.
ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ಧರ್ಮಗ್ರಂಥವಿದ್ದಂತೆ. ಸಂವಿಧಾನದ ಆಶಯ ಆಶೋತ್ತರಗಳು ಜಗತ್ತಿನ ಹಲವು ಯಶಸ್ವಿ ಪ್ರಜಾಪ್ರಭುತ್ವ ದೇಶಗಳ ಸಂವಿಧಾನದಲ್ಲೂ ಅಳವಡಿಸಲಾಗಿದೆ. ಡಾ| ಬಿ.ಆರ್. ಅಂಬೇಡ್ಕರ್ ಕೊಟ್ಟ ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಉತ್ತಮ ಸಂವಿಧಾನ ಎಂದು ಹೇಳಿದರು.
ಮಾಜಿ ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ ಮಾತನಾಡಿ, ಸಂವಿಧಾನ ರಚನೆ ಹಿಂದೆ ಅನೇಕ ಮಹಾನ್ ವ್ಯಕ್ತಿಗಳ ಶ್ರಮವಿದೆ. ಆ ಮಹಾನ್ ಪುರುಷರು ಸಂಕಷ್ಟಗಳನ್ನು ಎದುರಿಸಿ ನಮಗೆ ಬದುಕು ಹಕ್ಕನ್ನು ಕಲ್ಪಿಸಿದ್ದಾರೆ. ಅದರಲ್ಲೂ ಡಾ| ಅಂಬೇಡ್ಕರ್ ಸಾಕಷ್ಟು ಅಪಮಾನಕ್ಕೆ ಗುರಿಯಾಗಿದ್ದರೂ ದೇಶಕ್ಕೆ ಒಂದು ಉತ್ತಮ ಕೊಡುಗೆ ನೀಡಿದ್ದಾರೆ. ಆ ಸಂವಿಧಾನ ನಮಗೆ ದಾರಿದೀಪವಾಗಿದೆ. ನಾವು ಕೂಡ ಸಂವಿಧಾನದ ಹಾದಿಯಲ್ಲಿ ನಡೆಯಬೇಕಿದೆ ಎಂದು ಹೇಳಿದರು. ನಗರಸಭೆ ಸದಸ್ಯ ನಾಗರಾಜ ಕರಣಿಕ್, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ, ಸಂಜುಕುಮಾರ ಭಾವಿಕಟ್ಟಿ ಇತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.