ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ
Team Udayavani, Nov 9, 2021, 9:28 AM IST
ಕಲಬುರಗಿ: ನ.27ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು.
ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಲಬುರಗಿಯಲ್ಲಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದನ್ನು ನೆನಪಿಸಿಕೊಂಡ ಸಿಎಂ ಅವರು, ಕಲಬುರಗಿ ಪತ್ರಕರ್ತರು ಬಹಳ ಹೃದಯವಂತರು. ಜಿಲ್ಲೆಯ ಪತ್ರಕರ್ತರು ಅಂದಿನಿಂದ ಇಂದಿನವರೆಗೂ ತಮ್ಮೊಂದಿಗೆ ಹಾಗೆಯೇ ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, 25 ವರ್ಷಗಳ ನಂತರ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿದೆ. ಹೀಗಾಗಿ ಸಮ್ಮೇಳನ ಮಾದರಿಯಂತೆ ನಡೆಸಲಾಗುವುದು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಮ್ಮೇಳನದ ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕೋರಿದರು.
ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಂಗ್ಲೆ, ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ನಿಕಟಪೂರ್ವ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೆ„ರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.