ಶರಣಬಸವ ವಿವಿಯಲ್ಲಿ ಗಣತಂತ್ರ ಸಂಭ್ರಮ

ನಮ್ಮ ಸಂಸ್ಥಾನ ದಾಸೋಹ ಸೇವೆಯನ್ನು ಮುಂದುವರೆಸುವಲ್ಲಿ ಪೂಜ್ಯ ಅವ್ವಾಜಿಯವರ ಶ್ರಮದಾಯಕ ಪ್ರಯತ್ನಗಳಿಗೆ ಧನ್ಯವಾದ

Team Udayavani, Jan 27, 2021, 3:45 PM IST

ಶರಣಬಸವ ವಿವಿಯಲ್ಲಿ ಗಣತಂತ್ರ ಸಂಭ್ರಮ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನವು ದೇಶದ ಹಿತಕ್ಕಾಗಿ ಸತತ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಾ, ಜನರ ಯೋಗ ಕ್ಷೇಮವನ್ನು ಕಾಪಾಡುತ್ತಾ ಬಂದಿದೆ ಎಂದು ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿ ಪತಿ ಹಾಗೂ ಶರಣಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶರಣಬಸವ ವಿಶ್ವವಿದ್ಯಾಲಯ ಆವರಣದಲ್ಲಿ ಮಂಗಳವಾರ 72ನೇ ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೊಡಗು ಹಾಗೂ ಉತ್ತರ ಕರ್ನಾಟಕ ವಿಪತ್ತಿಗೆ ಸಿಲುಕಿದಾಗ ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಕೋಟಿ, ಕೋವಿಡ್‌ ಸಂದರ್ಭದಲ್ಲಿ ಹಗಲಿರುಳು
ಸೇವೆ ಮಾಡಿದ್ದ ಆಶಾ ಕಾರ್ಯಕರ್ತರಿಗೆ 2 ಲಕ್ಷ ಸಹಾಯಧನ, ಭೀಮಾ ನದಿ ಪ್ರವಾಹಕ್ಕೆ ಸಿಕ್ಕು ತತ್ತರಿಸಿದ ಜನರ ಜೀವನ ಸುಧಾರಿಸಲು 20 ಲಕ್ಷ ಹಾಗೂ ಇಡೀ ದೇಶದ ಅಸ್ಮಿತೆಯಾಗಿರುವ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ಸಮರ್ಪಿಸಲಾಗಿದೆ. ಕೊವೀಡ್‌ ಸಂಕಷ್ಟದ ಕಾಲದಲ್ಲಿ ಮೊದಲಿನಿಂದಲೂ
ಮಾಡಿದ್ದ ಅನ್ನದಾಸೋಹವನ್ನು ಕೂಡ ಇನ್ನೂ ಮುಂದುವರೆಸಿದ್ದು, ನೀರು, ನೆರಳು ನೀಡಿ ಪಾಲಿಸಲಾಗುತ್ತಿದೆ ಎಂದರು.

ಲಾಕ್‌ಡೌನ್‌ ಕಾಲದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನಗಳ ಮೂಲಕ ಬೋಧಿ ಸಿ, ವಿದ್ಯಾರ್ಥಿಗಳನ್ನು ಮಾನಸಿಕ ಸಶಕ್ತರನ್ನಾಗಿಸುತ್ತ ಬಂದಿದೆ. ಪಠ್ಯ ಚಟುವಟಿಕೆಗಳಲ್ಲಿ ತಮ್ಮ ಛಾಪು ಮೂಡಿಸಲು ಕಾರ್ಯತತ್ಪರರಾಗಿದ್ದಾರೆ. ಈ ಸಂದರ್ಭದಲ್ಲಿ ಅನೇಕ ವಿಚಾರ ಸಂಕೀರಣ (ವೇಬ್‌ನಾರ್‌)ಗಳನ್ನು ಹಮ್ಮಿಕೊಂಡು
ಅಧ್ಯಾಪಕರು ತಾವು ಸಹ ಅಧ್ಯಯನಶೀಲರು ಎಂದು ಸಾಬೀತುಪಡಿಸಿದ ಶಿಕ್ಷಕ ವರ್ಗಕ್ಕೆ ಡಾ| ಅಪ್ಪ ಅಭಿನಂದನೆ ಸಲ್ಲಿಸಿದರು.

ಸಹೋದರಿ ಕೋಮಲ ಎಸ್‌ ಅಪ್ಪಾ ಮಾತನಾಡಿ, ದೇಶವಾಸಿಗಳಿಗೆ ಆರೋಗ್ಯ ಮತ್ತು ಸಮೃದ್ಧಿಯನ್ನು ಆಶೀರ್ವದಿಸಲಿ ಎಂದು ಶರಣಬಸವೇಶ್ವರರಲ್ಲಿ
ವಿನಮ್ರವಾಗಿ ಪ್ರಾರ್ಥಿಸಿದರಲ್ಲದೇ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಹ ನಮ್ಮ ಸಂಸ್ಥಾನ ದಾಸೋಹ ಸೇವೆಯನ್ನು ಮುಂದುವರೆಸುವಲ್ಲಿ ಪೂಜ್ಯ ಅವ್ವಾಜಿಯವರ ಶ್ರಮದಾಯಕ ಪ್ರಯತ್ನಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿ ಪತಿ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್‌ ಹಾಗೂ
ಬೋರ್ಡ್‌ ಆಫ್‌ ಗವರ್ನರ್‌ನ ಸದಸ್ಯರಾದ ಮಾತೋಶ್ರೀ ಪೂಜ್ಯ ಡಾ| ದಾಕ್ಷಾಯಿಣಿ ಅವ್ವಾಜಿ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಪತಿ ಡಾ| ನಿರಂಜನ್‌ ವಿ. ನಿಷ್ಠಿ, ಸಮಕುಲಪತಿ ಡಾ| ವಿ.ಡಿ. ಮೈತ್ರಿ ಮತ್ತು ಎನ್‌.ಎಸ್‌.ದೇವರಕಲ್‌, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರಿ, ಡೀನ್‌ ಡಾ| ಲಕ್ಷ್ಮೀ ಪಾಟೀಲ ಮಾಕಾ ಮತ್ತು ಡಾ| ಬಸವರಾಜ ಮಠಪತಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್‌ ಡಾ| ಲಕ್ಷ್ಮೀ ಪಾಟೀಲ ಮಾಕಾ, ಪ್ರಾಚಾರ್ಯರಾದ ಡಾ| ಸುರೇಶ ನಂದಗಾಂವ, ಡಾ| ಎಸ್‌.ಜಿ. ಡೊಳ್ಳೇಗೌಡರ್‌, ಡಾ| ಎನ್‌.
ಎಸ್‌. ಪಾಟೀಲ ಇತರರು ಇದ್ದರು. ಸಹೋದರಿ ಮಹೇಶ್ವರಿ ಎಸ್‌.ಅಪ್ಪಾ, ಕೋಮಲ ಎಸ್‌. ಅಪ್ಪಾ, ಶಿವಾನಿ ಎಸ್‌. ಅಪ್ಪಾ ಹಾಗೂ ಅಪೂರ್ವ ದೇಶಭಕ್ತಿಗೀತೆ ಹಾಡಿದರು. ಶಿಕ್ಷಕರಾದ ಶಂಕರಗೌಡ ಹೊಸಮನಿ ಮತ್ತು ಚಂದ್ರಕಾಂತ ಪಾಟೀಲ ನಿರೂಪಿಸಿದರು. ಈ ಸಂದರ್ಭದಲ್ಲಿ ಎನ್‌. ಎಸ್‌.ಎಸ್‌ ಅ ಧಿಕಾರಿ ಮತ್ತು ವಿದ್ಯಾರ್ಥಿಗಳಿಂದ ಪರೇಡ್‌ ನಡೆಸಲಾಯಿತು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.