![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 20, 2022, 10:19 AM IST
ಕಲಬುರಗಿ: ಕೋವಿಡ್ ಮೂರನೇ ಅಲೆ ಪ್ರಾರಂಭವಾಗಿದ್ದರಿಂದ ಈ ಬಾರಿಯೂ ಕೋವಿಡ್ -19 ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವ ಮೂಲಕ 73ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 73ನೇ ಗಣರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಜನವರಿ 26ರಂದು ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 7:30ರೊಳಗೆ ಧ್ವಜಾರೋಹಣ ನೆರವೇರಿಸಬೇಕು. ತದನಂತರ ಪೊಲೀಸ್ ಡಿಎಆರ್ ಮೈದಾನದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಣ ನೆರವೇರಲಿದ್ದು, ಈ ಪ್ರಧಾನ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆ, ಶಾಮಿಯಾನ ಮುಂತಾದ ವ್ಯವಸ್ಥೆ ಮಾಡಬೇಕು. ಅತಿಥಿಗಳು, ಗಣ್ಯರು, ಪತ್ರಕರ್ತರು ಮುಂತಾದವರಿಗೆ ಆಸನ ವ್ಯವಸ್ಥೆ ಯಾಗಬೇಕು. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿಗಳು ವೇದಿಕೆಗೆ ಬರದಂತೆ ತಡೆಯಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ನಗರ ಪೊಲೀಸರನ್ನು ಒಳಗೊಂಡ ವಿಶೇಷ ತಂಡ ರಚಿಸಿ, ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಪೊಲೀಸ್, ಕೆಎಸ್‌ಆರ್‌ಪಿ, ಅಬಕಾರಿ ಗಾರ್ಡ್, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಅರಣ್ಯ ಇಲಾಖೆ ಇವುಗಳಿಂದ ಪಥಸಂಚಲನ ನಡೆಯುತ್ತಿದೆ. ಈ ಸಂಬಂಧ ಮೂರು ದಿನಗಳ ಮುಂಚೆಯೇ ರಿಹರ್ಸಲ್ ನಡೆಸಬೇಕೆಂದು ತಿಳಿಸಿದರು.
ಮುನ್ನೆಚ್ಚರಿಕೆಯಾಗಿ ಸ್ಥಳದಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್ ವ್ಯವಸ್ಥೆ ಗೊಳಿಸಬೇಕು ಎಂದು ತಿಳಿಸಿದ ಅವರು ಜ. 25ರಂದು ಸಂಜೆ ಹೊತ್ತಿಗೆ ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲಾ ಸಿದ್ಧತೆಗಳನ್ನು ಮುಗಿಸಿರಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ| ದಿಲೀಷ ಸಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿಸಿಪಿ ಅಡ್ನೂರು ಶ್ರೀನಿವಾಸಲು, ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತರಾದ ಮೋನಾ ರೂಟ್, ಗಣರಾಜ್ಯೋತ್ಸವ ಸಮಿತಿ ಸದಸ್ಯರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.