ಗಡಿನಾಡು ಕನ್ನಡ ಅಭಿವೃದ್ಧಿಗೆ ಅನುದಾನ ನೀಡಲು ಆಗ್ರಹ
ಅಧಿಕಾರ ಸ್ವೀಕರಿಸಿದ ಮೇಲೆ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಕಾರ್ಯಕ್ಕೆ ಶ್ರಮಿಸಲಾಗಿದೆ.
Team Udayavani, Mar 16, 2021, 6:21 PM IST
ಆಳಂದ: ಗಡಿನಾಡ ಕನ್ನಡ ಅಭಿವೃದ್ಧಿ ಭಾಷೆ ಕನ್ನಡಕ್ಕಾಗಿ ರಾಜ್ಯ ಸರ್ಕಾರ ಅನುದಾನ ನೀಡುವಲ್ಲಿ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದು ಖಜೂರಿ ಮಠದ ಮುರುಘೇಂದ್ರ ಸ್ವಾಮಿಗಳು ಹೇಳಿದರು.
ತಾಲೂಕಿನ ಖಜೂರಿ ಗ್ರಾಮದ ಕರಿಬಸವೇಶ್ವರ ಮಠದ ಕನ್ನಡ ಭವನದಲ್ಲಿ ವಲಯ ಕನ್ನಡ ಸಾಹಿತ್ಯ ಪರಿಷತ್ ಘಟಕ ಹಮ್ಮಿಕೊಂಡ ಸಾಹಿತ್ಯ ಪರಿಷತ್
ಸದಸ್ಯರಿಗೆ ಹಾಗೂ ಗ್ರಾಪಂ ಸದಸ್ಯರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಗಡಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ
ಸಕಾಲಕ್ಕೆ ಅಗತ್ಯಕ್ಕೆ ತಕ್ಕಂತ ಅನುದಾನ ಒದಗಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಧ್ವನಿಯಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು.
ತಾಲೂಕು ಕೇಂದ್ರ ಆಳಂದ ಪಟ್ಟಣದಲ್ಲಿ ಇಂದಿಗೂ ಕನ್ನಡ ಭವನ ನಿರ್ಮಾಣ ಕಾರ್ಯ ನಡೆದಿಲ್ಲ. ಆದರೆ ಗಡಿ ಭಾಗದ ಕನ್ನಡಾಭಿಮಾನಿಗಳ ಒತ್ತಾಸೆಯ ಮೇರೆಗೆ ಭವನ ನಿರ್ಮಾಣ ಕಾರ್ಯ ನಡೆದಿದೆ. ಅದು ತ್ವರಿತವಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಜಿಪಂ ಸದಸ್ಯ ಹರ್ಷಾನಂದ ಗುತ್ತೇದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಡಿಭಾಗದಲ್ಲಿ ಅನ್ಯ ಭಾಷೆಗಳ ಪ್ರಭಾವ ಮಧ್ಯೆ ಕನ್ನಡ ಕಟ್ಟುವ ಕಾರ್ಯಕ್ಕೆ ಕಸಾಪ ಘಟಕ ಶ್ರಮಿಸುತ್ತಿದೆ. ಕನ್ನಡ ಭವನ ಕಟ್ಟಡ ಉಳಿದ ಕಾಮಗಾರಿ ಪೂರ್ಣಗೊಳಿಸಲು ಶಾಸಕರ ಗಮನಕ್ಕೆ ತಂದು ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕಸಾಪ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ಅಧಿಕಾರ ಸ್ವೀಕರಿಸಿದ ಮೇಲೆ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಕಾರ್ಯಕ್ಕೆ ಶ್ರಮಿಸಲಾಗಿದೆ. ಭವನ ನಿರ್ಮಾಣ ಕಾರ್ಯ ನಡೆದಿವೆ. ಕಲಬುರಗಿಯಲ್ಲೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಿದ್ದು, ಬರುವ ಕಸಾಪ ಚುನಾವಣೆಯಲ್ಲಿ ಮರು ಆಯ್ಕೆ ಮಾಡಿದರೆ ವಿಶ್ವ ಸಮ್ಮೇಳನ ಮಾಡುವ ಜತೆಗೆ ತಾಲೂಕು ಮತ್ತು ಹೋಬಳಿ ಕಸಾಪ ಘಟಕಗಳನ್ನು ಚುರುಕುಗೊಳಿಸಲಾಗುವುದು. ಅಲ್ಲದೆ, ಕನ್ನಡ
ಕಾರ್ಯ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ, ಸಹಕಾರ ನೀಡಲಾಗುವುದು. ಹೆಚ್ಚಿನ ಮತಗಳನ್ನು ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಹೋಬಳಿ ಕಸಾಪ ಅಧ್ಯಕ್ಷ ಶಿವುಪುತ್ರ ಶಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಸಂಗಯ್ಯ ಸ್ವಾ , ಮಲ್ಲಿಕಾರ್ಜುನ ಕಂಡಗೂಳೆ, ಗೀತಾ ಹರಿಹರ, ಚಂದ್ರಶೇಕಾಂತ ಘೋಡಕೆ, ಆದಿನಾಥ ಹೀರಾ, ಶ್ರೀಕಾಂತ ಖೂನೆ, ದೌಲತರಾವ್ ಪಾಟೀಲ, ಮಡಿವಾಳಪ್ಪ ನಾಗರಾಳ, ಅಂಬಾಜಿ ಕೌಲಗಾ, ರಾಜಶೇಖರ ಹರಿಹರ, ಸಂಜೀವನ ದೇಶಮುಖ, ಗುಣಮಂತ ಢಗೆ, ಶಂಕರ ಬಂಡೆ, ಪಾರ್ವತಿ ಹರಿಹರ, ಶಿವಪ್ಪ ಘಂಟೆ, ಶರಣಪ್ಪ ಹೊಸಮನಿ, ಶರಣಬಸಪ್ಪ ಧೂಳೆ ಮತ್ತಿತರರು ಇದ್ದರು. ಮಂಜುನಾಥ ಕಂದಗೂಳೆ ಸ್ವಾಗತಿಸಿದರು. ಶ್ರೀಶೈಲ ಭೀಂಪೂರೆ ನಿರೂಪಿಸಿದರು. ಗಂಗಾಧರ ಕುಂಬಾರ ವಂದಿಸಿದರು. ಕಸಾಪ ಮತ್ತು ಗ್ರಾಪಂ ಸದಸ್ಯರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.