ಬಸ್ ಸೌಲಭ್ಯ ಒದಗಿಸಲು ಆಗ್ರಹ
Team Udayavani, Nov 26, 2021, 3:04 PM IST
ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಬುಧವಾರ ಎಐಡಿಎಸ್‌ಒ ಸಂಘಟನೆ ವತಿಯಿಂದ ಚಿತ್ತಾಪುರ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹೊನಗುಂಟಾ ಗ್ರಾಮದಿಂದ ಹಲವಾರು ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹಾಗೂ ಸಾಮಾನ್ಯ ಜನರು ತಮ್ಮ ದಿನ ನಿತ್ಯದ ಕೆಲಸಕ್ಕಾಗಿ ಶಹಾಬಾದ ನಗರಕ್ಕೆ ಬರುತ್ತಾರೆ. ಲಾಕ್ ಡೌನ್ ಮುಗಿದ ನಂತರ ಶಾಲೆ-ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕಾದ ಅವಶ್ಯಕತೆ ಇದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಹಾಗೂ ನಗರದ ಬಹುತೇಕ ವಿದ್ಯಾರ್ಥಿಗಳು ಬಸ್ ಮೂಲಕ ಪ್ರಯಣಿಸುತ್ತಾರೆ. ಹೀಗಾಗಿ ಅವರಿಗೆ ಸೂಕ್ತ ಬಸ್ ಸೌಲಭ್ಯ ಒದಗಿಸಬೇಕು ಎಂದು ಕೋರಲಾಯಿತು.
ಗ್ರಾಮದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಮುಗಿಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಶಹಾಬಾದ, ಜೇವರ್ಗಿ, ಚಿತ್ತಾಪುರ, ಕಲಬುರಗಿ ನಗರಕ್ಕೆ ಬರುತ್ತಿದ್ದಾರೆ. ಅವರ ಬಳಿ ಬಸ್ ಪಾಸ್ ಇದ್ದರೂ ಕೂಡ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಅವರು ಖಾಸಗಿ ವಾಹನಗಳಿಗೆ ದಿನಾಲೂ ಹಣ ನೀಡಿ ತೆರಳುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗುತ್ತಿದೆಯಲ್ಲದೇ, ವಿದ್ಯಾಭ್ಯಾಸಕ್ಕೂ ಹೊಡೆತ ಬೀಳುತ್ತಿದೆ ಎಂದು ಮನವಿಪತ್ರದಲ್ಲಿ ತಿಳಿಸಲಾಗಿದೆ. ಹೊನಗಂಟಾ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊನಗುಂಟಾದಿಂದ ಶಹಾಬಾದ್‌ಗೆ ಬೆಳಗ್ಗೆ 6ಕ್ಕೆ, 8ಕ್ಕೆ ಹಾಗೂ ಶಹಾಬಾದಿಂದ ಹೊನಗುಂಟಕ್ಕೆ ಮಧ್ಯಾಹ್ನ 1:30ಕ್ಕೆ, 4:30ಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಚಿತ್ತಾಪುರ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅ ಧಿಕಾರಿಗಳು ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ತುಳಜಾ ರಾಮ ಎನ್.ಕೆ, ತಾಲೂಕು ಅಧ್ಯಕ್ಷ ಕಿರಣ ಜಿ.ಮಾನೆ, ಉಪಾಧ್ಯಕ್ಷ ದೇವರಾಜ ಹೊನಗುಂಟ, ವಿದ್ಯಾರ್ಥಿಗಳಾದ ಮನುಗಿರಿ, ಸಿದ್ಧು ಕೊಲೆ, ಕೃಷ್ಣ, ರೇವಣಸಿದ್ಧು ಹಾಗೂ ಸಂಘಟನೆ ಮುಖಂಡರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.