![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2022, 1:11 PM IST
ಸೇಡಂ: ಕನ್ನಡಕ್ಕೆ ಮೊದಲ ಕೃತಿ ನೀಡಿದ ರಾಷ್ಟ್ರಕೂಟರ ರಾಜಧಾನಿ ಮಳಖೇಡಕ್ಕೆ ಮೂಲ ಹೆಸರು ಮಾನ್ಯಖೇಟ ಎಂದು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ| ಮಹೇಶ ಜೋಶಿ ಹೇಳಿದರು.
ತಾಲೂಕಿನ ಮಳಖೇಡದಲ್ಲಿರುವ ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಐತಿಹಾಸಿಕ ಕೋಟೆಗೆ ಭೇಟಿ ನೀಡಿ ಮಾತನಾಡಿದ ಅವರು, ಇಲ್ಲಿನ ಕೋಟೆಗೆ ಈ ಭಾಗದ ಮಕ್ಕಳನ್ನು ಕರೆತಂದು ರಾಷ್ಟ್ರಕೂಟರ ಇತಿಹಾಸ ಮತ್ತು ಅವರ ಸಾಹಸ ಶೌರ್ಯ ಹಾಗೂ ಅವರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ನೀಡಿದ ಕೊಡುಗೆಗಳನ್ನು ಮಕ್ಕಳಿಗೆ ತಿಳಿಸುವಂತಾಗಬೇಕು. ಪ್ರತಿ ವರ್ಷ ರಾಷ್ಟ್ರಕೂಟರ ಉತ್ಸವವನ್ನು ಸರ್ಕಾರದಿಂದ ಆಯೋಜಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಮಳಖೇಡ ಕೋಟೆ ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಬೇಕು. ಕೋಟೆ ಒಳಗೆ ರಾಷ್ಟ್ರಕೂಟರ ಆಳ್ವಿಕೆಯ ಇತಿಹಾಸ ತಿಳಿಸುವ ರೀತಿಯ ಕಲಾಕೃತಿ ಹಾಗೂ ಬರಹಗಳನ್ನು ಅಳವಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದರು.
ಕಸಾಪ ತಾಲೂಕಾಧ್ಯಕ್ಷೆ ಸುಮಾ ಚಿಮ್ಮನ ಚೋಡಕರ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಟಗಿ, ತಾಲೂಕು ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಗೋಣಗಿ, ರಮೇಶ ರಾಠೊಡ, ವಲಯ ಅಧ್ಯಕ್ಷ ಬಸವರಾಜ ದೇಶಮುಖ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಶಂಕರಯ್ಯ ಸ್ವಾಮಿ, ಸಾಹಿತಿ ಮುಡಬಿ ಗುಂಡೇರಾವ, ಪ್ರಮುಖರಾದ ಕಲ್ಯಾಣಪ್ಪ ಪಾಟೀಲ, ರಾಜಶೇಖರ ಪುರಾಣಿಕ, ಗುರು ತಳಕಿನ್, ರಾಜು ಕಟ್ಟಿ, ರಾಚಣ್ಣ ಬಳಗಾರ, ಶರಣಪ್ಪ ಕೊಳ್ಳಿ, ಲಕ್ಷ್ಮಣ ರಂಜೋಳಕರ್, ಗೌಡಪ್ಪಗೌಡ ಪಾಟೀಲ, ರವಿಕುಮಾರ ಸಾಹುಕಾರ, ಸತೀಶ ನಂದೂರ, ರಾಮು ಮಂಗಾ ಹಾಗೂ ಇತರರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.