ಯೂಟ್ಯೂಬ್ ಚಾನೆಲ್ ವಿರುದ್ಧ ಕ್ರಮಕ್ಕೆ ಕಂದಾಯ ನೌಕರರ ಆಗ್ರಹ
Team Udayavani, Aug 26, 2022, 3:57 PM IST
ಸೇಡಂ: ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸುದ್ದಿ ಬಿತ್ತರಿಸಿರುವ ಯೂಟ್ಯೂಬ್ ಚಾನೆಲ್‌ವೊಂದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ನೌಕರರು ಒತ್ತಾಯಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ತಹಶೀಲ್ದಾರ್‌ಗೆ ನೀಡಿರುವ ಅವರು, ಯಾವುದೇ ಆಧಾರವಿಲ್ಲದೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಿಡುವುದರಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ನೌಕರರಿಗೂ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಈ ರೀತಿಯ ಸುದ್ದಿ ಬಿತ್ತರಿಸಿರುವ ಯುಟ್ಯೂಬ್ ಚಾನೆಲ್ ವಿರುದ್ಧ ಪ್ರಕರಣ ದಾಖಲಿಸಬೇಕು ಇಲ್ಲದಿದ್ದರೇ ಕಂದಾಯ ಇಲಾಖೆಯ ಎಲ್ಲ ನೌಕರರು ಕಾರ್ಯ ನಿರ್ವಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಶಂಕರಯ್ಯ ಸ್ವಾಮಿ ಇಮಡಾಪುರ, ಕಂದಾಯ ಇಲಾಖೆ ನೌಕರರ ಸಂಘದ ತಾಲೂಕಾಧ್ಯಕ್ಷ ಅಣವೀರಪ್ಪ, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಸಂಘದ ತಾಲೂಕಾಧ್ಯಕ್ಷ ಪ್ರವೀಣ, ಗ್ರೇಡ್-2 ತಹಶೀಲ್ದಾರ್ ಭೀಮಣ್ಣ ಕುದುರಿ, ಉಪ ತಹಶೀಲ್ದಾರರಾದ ಅರುಣ ಕುಮಾರ, ಶರಣಗೌಡ ಪಾಟೀಲ, ಶಿರಸ್ತೇದಾರ ರಾಜಕುಮಾರ ಶೆಟ್ಟಿ, ವೆಂಕಟೇಶ, ಕಂದಾಯ ನಿರೀಕ್ಷಕರಾದ ರವೀಂದ್ರ, ರಾಘವೇಂದ್ರ, ಸತ್ಯನಾರಾಯಣ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.