ಅಕ್ರಮ ಗಮನ ಸೆಳೆಯಲು ಪಾದಯಾತ್ರೆ: ಶರಣಪ್ರಕಾಶ
ಆಧುನೀಕರಣ ಕಾಮಗಾರಿ ಸಂಪೂರ್ಣವಾಗಿ ಕಳಪೆಮಟ್ಟದಿಂದ ಕೂಡಿದೆ ಎಂದು ಆಪಾದಿಸಿದರು.
Team Udayavani, Jul 15, 2021, 6:56 PM IST
ಚಿಂಚೋಳಿ: ಸೇಡಂ ಮತ್ತು ಚಿಂಚೋಳಿ ತಾಲೂಕಿನ ರೈತರ ಜೀವನಾಡಿ ಆಗಿರುವ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಮುಖ್ಯಕಾಲುವೆ ಮತ್ತು ಜಲಾಶಯ ಆಧುನೀಕರಣ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮ, ಭ್ರಷ್ಟಾಚಾರ ಕುರಿತು ಸರ್ಕಾರದ ಗಮನ ಸೆಳೆಯಲು ಮುಲ್ಲಾಮಾರಿ ಜಲಾಶಯದಿಂದ (ನಾಗರಾಳ ಗ್ರಾಮದಿಂದ) ಕರ್ಚಖೇಡ ಗ್ರಾಮದವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಚಿವ ಡಾ|ಶರಣಪ್ರಕಾಶ ಪಾಟೀಲ ಹೇಳಿದರು.
ಸುಲೇಪೇಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿ ಕಾರದಲ್ಲಿದ್ದಾಗ ಕಲ್ಯಾಣ ಕರ್ನಾಟಕದ ಬೆಣ್ಣೆತೊರೆ, ಗಂಡೋರಿ ನಾಲಾ, ಅಮರ್ಜಾ, ಕಾರಂಜಾ, ಕೆಳದಂಡೆ ಮುಲ್ಲಾಮಾರಿ, ನೀರಾವರಿ ಯೋಜನೆಗಳನ್ನು ಪುನಶ್ಚೇತನಗೊಳಿಸಿ ರೈತರ ಹೊಲಗಳಿಗೆ ನೀರು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 10 ಸಾವಿರ ಕೋಟಿ ರೂ. ನೀರಾವರಿ ಯೋಜನೆಗಳಿಗೆ ನೀಡಿತ್ತು. ಅದರಲ್ಲಿ ಚಿಂಚೋಳಿ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯ 80 ಕಿ.ಮೀ ಮುಖ್ಯಕಾಲುವೆ ನವೀಕರಣ ಮಾಡುವುದಕ್ಕಾಗಿ ಮಧ್ಯಮ ನೀರಾವರಿ ಸಚಿವ ಎಂ.ಬಿ.ಪಾಟೀಲ ಜಲಾಶಯಕ್ಕೆ ಭೇಟಿ ನೀಡಿ ಕರ್ನಾಟಕ ನೀರಾವರಿ ನಿಗಮದಿಂದ 128 ಕೋಟಿ ರೂ. ಅನುದಾನ ನೀಡಿದ್ದೆವು. ಆದರೆ ಮುಖ್ಯಕಾಲುವೆ ಆಧುನೀಕರಣ ಕಾಮಗಾರಿ ಸಂಪೂರ್ಣವಾಗಿ ಕಳಪೆಮಟ್ಟದಿಂದ ಕೂಡಿದೆ ಎಂದು ಆಪಾದಿಸಿದರು.
ಚಿಮ್ಮನಚೋಡ, ಚಿಮ್ಮಾಇದಲಾಯಿ, ಸುಲೇಪೇಟ, ಬೆಡಕಪಳ್ಳಿ, ರಾಮತೀರ್ಥ, ಯಾಕಾಪುರ, ಗರಗಪಳ್ಳಿ, ಮೋತಕಪಳ್ಳಿ, ಚಿಮ್ಮಾಇದಲಾಯಿ, ದಸ್ತಾಪುರ, ದೋಟಿಕೊಳ, ಕನಕಪುರ, ಗೌಡನಹಳ್ಳಿ, ನಿಮಾಹೊಸಳ್ಳಿ, ಅಣವಾರ, ಪೆಂಚನಪಳ್ಳಿ, ಕೆರೋಳಿ ಮುಂತಾದ ಗ್ರಾಮಗಳಲ್ಲಿ ಕಾಲುವೆ ಕಾಮಗಾರಿ ಸಂಪೂರ್ಣ ಕಳಪೆಮಟ್ಟದಿಂದ ಕೂಡಿದೆ ಎಂದು ಹೇಳಿದರು.
ಜಲಾಶಯದ ಗೇಟಿನ ಕೆಳಭಾಗದಲ್ಲಿ 40ಕೋಟಿ ರೂ. ಅನುದಾನ ನೀಡಲಾಗಿದೆ. ಕೆಲಸ ಸಂಪೂರ್ಣ ಕಳಪೆಮಟ್ಟದಿಂದ ಕೂಡಿದ್ದರಿಂದ ಎಲ್ಲವೂ ನೀರಿನ ರಭಸಕ್ಕೆ ಕಿತ್ತುಕೊಂಡು ಹೋಗಿದೆ. ಯೋಜನೆಯ ಪುರ್ನವಸತಿ ಕೇಂದ್ರಗಳಲ್ಲಿ ವಾಸಿಸುವ ನಿರಾಶ್ರಿತರಿಗೆ ಮೂಲ ಸೌಕರ್ಯ ನೀಡಲು 18 ಕೋಟಿ ರೂ.ನೀಡಲಾಗಿದೆ. ಆದರೆ ಕೆಲಸಗಳೆಲ್ಲವೂ ಕಳಪೆಮಟ್ಟದಿಂದ ಮಾಡಲಾಗಿದೆ. ಈ ಕಾಮಗಾರಿಗಳನ್ನು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.