ಲಾರಿ-ಆಟೋ ಢಿಕ್ಕಿ: ಜಾತ್ರೆಯಿಂದ ಮರಳುತ್ತಿದ್ದ ಬಾಲಕ ಸಾವು
Team Udayavani, May 1, 2022, 12:57 PM IST
ಚಿಂಚೋಳಿ: ಲಾರಿ ಮತ್ತು ಆಟೋಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಕುಟುಂಬವೊಂದಕ್ಕೆ ತೀವ್ರ ಗಾಯವಾಗಿದ್ದು, ಮಗುವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಲೇಪೇಟ ಗ್ರಾಮದ ಬೆಡಕಪಳ್ಳಿ ಕ್ರಾಸ್ ಸಮೀಪ ಶುಕ್ರವಾರ ನಡೆದಿದೆ.
ಬೆಡಕಪಳ್ಳಿ ಗ್ರಾಮದ ಶ್ರೀಕಾಂತ ಸ್ವಾಮಿ ವಿಜಯಕುಮಾರಸ್ವಾಮಿ (8) ಮೃತಪಟ್ಟ ಮಗು.
ಬೆಡಕಪಳ್ಳಿ ಗ್ರಾಮದ ಶ್ರೀಕಾಂತ ಸ್ವಾಮಿ ವಿಜಯಕುಮಾರ ಸ್ವಾಮಿ ಎನ್ನುವರು ಕುಟುಂಬ ಸಮೇತ ಸುಲೇಪೇಟ ವೀರಭದ್ರೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರಳಿ ಆಟೋದಲ್ಲಿ ತಮ್ಮ ಗ್ರಾಮಕ್ಕೆ ಬರುವಾಗ ಈ ಘಟನೆ ಸಂಭವಿಸಿದೆ.
ಚಿಂಚೋಳಿ- ಸೇಡಂ ರಾಜ್ಯ ಹೆದ್ದಾರಿ ಹೊರವಲಯದಲ್ಲಿ ಸೇಡಂ ಕಡೆಯಿಂದ ವೇಗವಾಗಿ ಹೊರಟಿದ್ದ ಲಾರಿ, ಆಟೋಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ವಂದನಾ ತಲೆಗೆ ತೀವ್ರ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಸುಲೇಪೇಟ ಸಿಪಿಐ ಜಗದೀಶ ಕೆಜಿ, ಪಿಎಸ್‌ಐ ಸುಖಾನಂದ ಸಿಂಗ್ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಯಾಳುಗಳಿಗೆ ಸಿಗದ ಚಿಕಿತ್ಸೆ
ಚಿಂಚೋಳಿ-ಕಲಬುರಗಿ ರಸ್ತೆ ಮಾರ್ಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಲು ವೈದ್ಯರು ಲಭ್ಯವಾಗಲಿಲ್ಲ. ನರ್ಸ್ ಮತ್ತು ಸಿಬ್ಬಂದಿ ಡ್ರೆಸ್ಸಿಂಗ್ ಮಾಡಿ ಚಿಂಚೋಳಿ ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ.
ಕರವೇ ಎಚ್ಚರಿಕೆ
ಖಾಲಿ ಇರುವ ಹುದ್ದೆಗಳನ್ನು ಸೇಡಂ ಶಾಸಕರು, ಡಿಎಚ್‌ಒ ಗಮನಹರಿಸಿ ಭರ್ತಿಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರಾದ ಮಲ್ಲಿಕಾರ್ಜುನ ಪಾಲಾದಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಸಚಿನ್ ಚವ್ಹಾಣ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.