ಅನುದಾನವಿಲ್ಲದೇ ರಸ್ತೆ ಸುಧಾರಣೆ ಸ್ಥಗಿತ
Team Udayavani, Apr 21, 2022, 12:06 PM IST
ಚಿಂಚೋಳಿ: ತಾಲೂಕಿನ ಫೀರೋಜಾ ಬಾದ-ಕಮಲಾಪುರ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗದೇ ರಸ್ತೆ ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ.
ತಾಲೂಕಿನ ಸಾಸರಗಾಂವ, ರಾಣಾಪುರ, ಚಂದನಕೇರಾ, ಪಂಗರಗಾ, ಚೇಂಗಟಾ ಗ್ರಾಮಗಳ ಮಾರ್ಗವಾಗಿ ಕಮಲಾಪುರ ತಾಲೂಕಿಗೆ ರಸ್ತೆ ಸಂಪರ್ಕ ಕಲ್ಪಿಸುವುದಕ್ಕಾಗಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ಈ ರಸ್ತೆ ಸುಧಾರಣೆಗೋಸ್ಕರ 2015-16ನೇ ಸಾಲಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
2016-17ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆ 5056 ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ 15 ಕೋಟಿ ರೂ., ಫಿರೋಜಾಬಾದ-ಕಮಲಾಪುರ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನವನ್ನು ಸರ್ಕಾರ ಮಂಜೂರಿ ಮಾಡಿದ್ದರಿಂದ ಕಾಮಗಾರಿ ಪ್ರಾರಂಭಿಸಲಾಗಿತ್ತು. ಆನಂತರ ಬಿಲ್ಲು ಪಾವತಿ ಆಗದೇ ಇದ್ದುದರಿಂದ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ ಎನ್ನಲಾಗಿದೆ.
ಸರ್ಕಾರದಿಂದ 11ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ 15 ಕೋಟಿ ರೂ.ಗಳಲ್ಲಿ ಗುತ್ತಿಗೆದಾರನಿಗೆ ಇದುವರೆಗೆ 4.22ಕೋಟಿ ರೂ. ಮಾತ್ರ ಬಿಲ್ಲು ಪಾವತಿಯಾಗಿದೆ. 2020-21ನೇ ಸಾಲಿನಲ್ಲಿ 37ಲಕ್ಷ ರೂ. ಬಿಲ್ಲು ಪಾವತಿಯಾಗಿದೆ. ಆದರೆ ಉಳಿದ ಬಿಲ್ಲು ಪಾವತಿಯಾಗದೇ ಇದ್ದುದಕ್ಕೆ ಕಾಮಗಾರಿ ಸ್ಥಗಿತವಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪಂಗರಗಾ, ಚೆಂಗಟಾ ಗ್ರಾಮಗಳ ಹತ್ತಿರ ಮುಖ್ಯರಸ್ತೆ ಬದಿಯಲ್ಲಿ ಐದು ಅಡಿ ತೆಗ್ಗು ತೋಡಲಾಗಿದೆ. ತೆಗ್ಗಿನಲ್ಲಿ ಮುರುಮು ಭರ್ತಿಗೊಳಿಸದೇ ಇರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಲ್ಲೇ ಸಾಗುವಂತಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಈ ರಸ್ತೆ ಅಭಿವೃದ್ಧಿ ಕೆಲಸ ನಡೆದಿಲ್ಲ. ಈ ರಸ್ತೆ ಮೂಲಕ ಚೆಂಗಟಾ, ಸೋಂತ, ಕಲಮೂಡ ತಾಂಡಾಗಳಿಗೆ ಹೋಗಲು ತೀವ್ರ ತೊಂದರೆ ಪಡುವಂತಾಗಿದೆ. ಚಂದನಕೇರಾ-ಪಂಗರಗಾ ಗ್ರಾಮದಿಂದ ಹಾಯ್ದು ಹೋಗಿರುವ ಬಹುಗ್ರಾಮ ಯೋಜನೆಯ ಪೈಪಲೈನ್ ರಸ್ತೆ ಮಧ್ಯೆ ಇರುವುದರಿಂದ ರಸ್ತೆ ಕಾಮಗಾರಿ ಸ್ಥಗಿತವಾಗಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಬೇಕಾಗಿದೆ. -ಆನಂದ ಕಟ್ಟಿ, ಎಇಇ, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.