ಎಲೆನಾವದಗಿ ಗ್ರಾಮಸ್ಥರಿಂದ ಸತ್ಯಾಗ್ರಹ
Team Udayavani, Nov 26, 2021, 12:22 PM IST
ಆಳಂದ: ಗ್ರಾಮೀಣ ಭಾಗದಲ್ಲಿ ನೀರು, ರಸ್ತೆ, ವಿದ್ಯುತ್ ಚರಂಡಿಗಳಂತ ಕನಿಷ್ಟ ಸೌಲಭ್ಯಗಳನ್ನು ಸಹ ಒದಗಿಸಲು ಆಗದೇ ಇರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆಡಳಿತ ಸಂಪೂರ್ಣಗಿ ವಿಫಲವಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಕೊರಳ್ಳಿ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕವು ಕೊಡಲಹಂಗರಗಾ ಗ್ರಾಪಂ ವ್ಯಾಪ್ತಿಯ ಎಲೆನಾವದಗಿ ಗ್ರಾಮದಲ್ಲಿ ಕಾಮಗಾರಿಯ ಅವ್ಯವಹಾರ ತನಿಖೆಗೆ ಒತ್ತಾಯಿಸಿ ಹಾಗೂ ಮೂಲಸೌಲಭ್ಯ ಕಲ್ಪಿಸುವಂತೆ ಗುರುವಾರ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡು ತಾಪಂ ಕಚೇರಿ ಎದುರು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಆರಂಭಿಸಿದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿಗೆ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬಂದರೂ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿಯಾಗಿ ಹಣ ಲೂಟಿ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಘೋಡಕೆ, ಪ್ರಧಾನ ಕಾರ್ಯದರ್ಶಿ ಶರಣ ಕುಲಕರ್ಣಿ ಮಾತನಾಡಿ ಬೇಡಿಕೆ ಈಡೇರದಿದ್ದಲ್ಲಿ ಉಪವಾಸ ಸತ್ಯಾಗ್ರಹ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗುಡಗಿದರು.
ಎಲೆನಾವದಗಿಯ 10 ಲಕ್ಷ ರೂ. ವೆಚ್ಚದ ಸಾಮೂಹಿಕ ಶೌಚಾಲಯ ನಿರ್ನಾಮ ಕೈಗೊಂಡಿದ್ದು, ಪುನರ್ ನಿರ್ಮಾಣ ಕೈಗೊಳ್ಳಬೇಕು. ಮಂಜೂರಾದ 3.5 ಲಕ್ಷ ರೂ. ವೆಚ್ಚದ ಶಾಲಾ ಆಟದ ಮೈದಾನ ಕಾಮಗಾರಿಯನ್ನು ಶೀಘ್ರವೇ ಕೈಗೊಳ್ಳಬೇಕು. 15ನೇ ಹಣಕಾಸಿನ ಏಳು ಲಕ್ಷ ರೂ. ದುರ್ಬಳಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ಬೀದಿ ದೀಪ, ರಸ್ತೆ, ರಚಂಡಿ ನಿರ್ಮಾಣ, ಮಹಿಳಾ ಶೌಚಾಲಯ, ಕುಡಿಯುವ ನೀರಿನ ಪೈಪಲೈನ್ ದುರಸ್ತಿ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ವೇದಿಕೆ ಯುವ ಘಟಕದ ಕಾರ್ಯದರ್ಶಿ ಗಣಪತ ರಾವ್ ಪಾಟೀಲ, ಗ್ರಾಮ ಘಟಕದ ಅಧ್ಯಕ್ಷ ದತ್ತಪ್ಪ ಪೂಜಾರಿ, ಉಪಾಧ್ಯಕ್ಷ ಚಂದ್ರಶೇಖರ ಬಿರಾದಾರ, ಗ್ರಾಮದ ನಾಗೇಂದ್ರಪ್ಪ ಪಾಟೀಲ, ಶಿವಲಿಂಗ ನಾಗೋಜಿ, ಈರಣ್ಣಾ ದೇವಂತಗಿ, ಗಂಗಾರಾವ್ ಹೊಸದೊಡ್ಡಿ, ಧರ್ಮರಾಯ ಮಾಲಿಪಾಟೀಲ, ಶ್ರೀಪತಿ ಪೂಜಾರಿ, ಅನಿಲ ಜಮಾದಾರ, ಚಂದ್ರಕಾಂತ ದೇವಣಗಾಂವ, ರಾಜು ಬಿರಾದಾರ, ಕುಮಾರ ಬಾವಿಮನಿ, ರವಿಂದ್ರ ಪೂಜಾರಿ, ಮಲ್ಲಪ್ಪ ಪೊಳೆ, ಖಾಜಾಸಾಬ್ ಮೈನೋದ್ದೀನ್ ಅಬ್ದುಲ್ ಖಂಡಾಳೆ, ನಾಗಪ್ಪ ಕೆರೆ, ಅಬ್ದುಲ್ ಘನಿ, ಶಾಂತಪ್ಪ ಪೂಜಾರಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಾಗಮೂರ್ತಿ ಕೆ. ಶೀಲವಂತ ಅವರು ಅವ್ಯವಹಾರ ಕುರಿತು ತನಿಖೆ ಕೈಗೊಂಡು ತಪ್ಪಿತಸ್ಥರಿಗೆ ನೋಟಿಸ್ ಜಾರಿಗೊಳಿಸಿ, ವಾರದೊಳಗೆ ಖುದ್ದಾಗಿ ಪರಿಶೀಲನೆ ನಡೆಸುವುದಾಗಿ ಲಿಖೀತ ಭರವಸೆ ನೀಡಿದ ಮೇಲೆ ಸತ್ಯಾಗ್ರಹ ಹಿಂದಕ್ಕೆ ಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.