ದೇಶದ ಪರಂಪರೆ ಉಳಿಸಿ-ಬೆಳೆಸಿ: ಸಿದ್ದೇಶ್ವರ ಸ್ವಾಮೀಜಿ
Team Udayavani, Dec 18, 2021, 12:59 PM IST
ಆಳಂದ: ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೇ, ದೇಶದ ಮೂಲ ಸಂಸ್ಕೃತಿ, ಆಚರಣೆಯಿಂದ ದೂರ ಸರಿಯದೇ ಪರಂಪರೆ ಉಳಿಸುವ ಕಾರ್ಯವಾಗಬೇಕು ಎಂದು ಸ್ಥಳೀಯ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು ನುಡಿದರು.
ತಾಲೂಕಿನ ಹೊದಲೂರ ಗ್ರಾಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯ ಸ್ವಾಮಿ ನಿವಾಸದಲ್ಲಿ “ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಿದ್ಧೇಶ ಸ್ವಾಮಿ ದಂಪತಿಯ “ಜಾನಪದ ಸೀಮಂತ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಮಾತನಾಡಿ, ಮಗು ಜನಿಸಿದಾಗ ಐದೇಶಿಯಿಂದ ಆರಂಭವಾಗಿ ವ್ಯಕ್ತಿಯ ಜೀವನದ ಕೊನೆ ವರೆಗೆ ವಿವಿಧ ಸಂಸ್ಕಾರ ಮಾಡಲಾಗುತ್ತದೆ. ಪ್ರತಿಯೊಂದು ಸಂಸ್ಕಾರಕ್ಕೆ ಅದರದೇ ಆದ ಹಿನ್ನಲೆ, ಅರ್ಥವಿದೆ. ಸೀಮಂತ ಸಂಸ್ಕಾರವು ತಾಯಿಯಾಗುವ, ಮತ್ತೊಂದು ಜೀವವನ್ನು ನೀಡುವ ಪ್ರಕ್ರಿಯೆಯ ಭಾಗವಾಗಿದೆ. ಈ ಪದ್ಧತಿ ನೂರಾರು ವರ್ಷದಿಂದ ಆಚರಣೆಯಲ್ಲಿದ್ದು, ಇಂತಹ ಆಚರಣೆಗಳು ಪ್ರಸ್ತುತ ದಿನಗಳಲ್ಲಿ ಕಡಿಮೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕಜಾಪ ಜಿಲ್ಲಾ ಕಾರ್ಯದರ್ಶಿ ಎಚ್. ಬಿ. ಪಾಟೀಲ, ಪ್ರಮುಖರಾದ ಸುನೀಲ ಕುಮಾರ ವಂಟಿ, ದೇವೇಂದ್ರಪ್ಪ ಗಣಮುಖೀ, ಶರಣ ಬಸಪ್ಪ ಮಾಲಿಬಿರಾದಾರ ದೇಗಾಂವ, ರೇಣುಕಾಚಾರ್ಯ ಸ್ಥಾವರಮಠ, ಸಿದ್ಧರಾಮ ತಳವಾರ, ಜಗನ್ನಾಥ ಈಟಿ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.