ಶಾಲೆ ಜೀವಂತ ದೇಗುಲ: ಖಜೂರಿ ಕೋರಣೇಶ್ವರ ಶ್ರೀ
Team Udayavani, Feb 10, 2022, 11:44 AM IST
ಆಳಂದ: ಶಾಲೆಗಳು ಜೀವಂತ ದೇವಾಲಯಗಳಿದ್ದಂತೆ. ಅವುಗಳಿಗೆ ಕುಂದು ಬಾರದಂತೆ ನೋಡಿಕೊಂಡು ಹೋಗುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಖಜೂರಿಯ ಕೋರಣ್ಣೇಶ್ವರ ವಿರಕ್ತಮಠದ ಪೀಠಾಧಿಪತಿ ಮುರುಘೇಂದ್ರ ಕೋರಣ್ಣೇಶ್ವರ ಸ್ವಾಮೀಜಿ ನುಡಿದರು.
ಖಜೂರಿ ಕೋರಣೇಶ್ವರ ಮಠದ ನಿಜಾಚರಣೆ ವಸತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 19ನೇ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿಗಳು ಮತ್ತು ಪಾಲಕರ ಸಮ್ಮಿಲನ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಗಡಿನಾಡಿನಲ್ಲಿ ಶಿಕ್ಷಣ ಮತ್ತು ಕನ್ನಡ ಸಾಹಿತ್ಯದ ಕಾರ್ಯಕ್ಕೆ ಶ್ರೀಮಠ ಸದಾ ಸಿದ್ಧವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹಣಮಂತ ಶೇರಿ, ಗಡಿನಾಡಿನಲ್ಲಿ ಶಾಲೆಗಳನ್ನು ನಡೆಸಿಕೊಂಡು ಹೋಗುವುದು ಈಗಿನ ದಿನಮಾನಗಳಲ್ಲಿ ಬಹಳ ಕಷ್ಟಕರವಾಗಿದೆ. ಅದರಲ್ಲೂ ಕನ್ನಡ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಅದಕ್ಕಾಗಿ ಸರ್ಕಾರಗಳು ಗಡಿನಾಡಿನಲ್ಲಿರುವ ಎಲ್ಲ ಶಾಲೆ-ಕಾಲೇಜುಗಳ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕಿದೆ ಎಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷ ಮಂಜುನಾಥ ಬಂಗರಗೆ, ಬಸವರಾಜ ಢಗೆ, ಗುರುಬಸಪ್ಪ ಹುಲ್ಲೆ, ವೈಜನಾಥ ಕಂದಗೂಳೆ, ಕುಮಾರ ತುಪ್ಪಾದೊಡ್ಡೆ, ಗುರು ಬಂಗರಗಿ, ಮುಖ್ಯಶಿಕ್ಷಕ ಸುಭಾಷ ಹರಳಯ್ಯ, ಡಿ.ಎಂ. ಪಾಟೀಲ, ಮಲ್ಲಿಕಾರ್ಜುನ ಮಾಳಿ, ಗುರು ಬಂಗರಗಿ, ಶರಣಬಸಪ್ಪ ಶಿವಮೂರ್ತಿ, ರಾಜಕುಮಾರ ಕಲಶೆಟ್ಟಿ, ಶ್ರುತಿ ಎಂ. ಹಡಪದ, ಲಕ್ಷ್ಮಣ ನಡಗೇರಿ ಇದ್ದರು.
ವಿರೇಶ ನಂದಿಕೊಲ ಪ್ರಾರ್ಥಿಸಿದರು, ಲಲಿತಾ ನಡಗೇರಿ ಸ್ವಾಗತಿಸಿದರು, ವಿಜಯ ಪೂಜಾರಿ ನಿರೂಪಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.