ತೈಲ ಬೆಲೆ ಏರಿಕೆಗೆ ಖಂಡನೆ
Team Udayavani, Jul 1, 2020, 10:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಬಾದ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಅದನ್ನು ಕಡಿಮೆಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಡೆಗಟ್ಟಬೇಕೆಂದು ಒತ್ತಾಯಿಸಿ ಮಂಗಳವಾರ ಜೆಡಿಎಸ್ ಪಕ್ಷದ ವತಿಯಿಂದ ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಕಳೆದ ಇಪ್ಪತ್ತು ದಿನಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ 10 ರೂ. ಹೆಚ್ಚಳವಾಗಿದೆ. ಕೇಂದ್ರ ಸರ್ಕಾರ ಕೂಡಲೇ ಜನವಿರೋಧಿ ನೀತಿ ಕೈಬಿಡಬೇಕು ಎಂದರು.
ಜೆಡಿಎಸ್ ಅಧ್ಯಕ್ಷ ರಾಜ ಮಹ್ಮದ್ ರಾಜಾ, ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ, ಮೈನೊದ್ದೀನ್, ನಾಮದೇವ ಕಾಂಬಳೆ, ನಗರಸಭೆ ಸದಸ್ಯ ಅಮ್ಜದ್ ಹುಸೇನ, ಅಬ್ದುಲ್ ಜಬ್ಟಾರ, ವಿಜಯಲಕ್ಷ್ಮೀ ಬಂಗರಗಿ, ಮಹ್ಮದ ಚಾಂದ ವಾಹೀದಿ, ಬಸವರಾಜ ಮಯೂರ, ಯೂಸುಫ್ ಸಾಹೇಬ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.