ಸಿಗದ ಹತ್ತಿ ಬೀಜ: ತಪ್ಪದ ರೈತರ ಪರದಾಟ
Team Udayavani, Jun 25, 2022, 12:16 PM IST
ಜೇವರ್ಗಿ: ಅತಿವೃಷ್ಟಿ, ಅನಾವೃಷ್ಟಿಯಿಂದ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ತಾಲೂಕಿನ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತಲು ಹತ್ತಿ ಬೀಜ ದೊರಕದೇ ಪರದಾಡುವಂತೆ ಆಗಿದೆ.
ಕಳೆದ ಒಂದು ವಾರದಿಂದ ಜೇವರ್ಗಿ, ಯಡ್ರಾಮಿ ತಾಲೂಕಿನಾದ್ಯಂತ ರೈತರು, ಮಹಿಳೆಯರು ಹತ್ತಿ ಬೀಜಕ್ಕಾಗಿ ಸಾಕಷ್ಟು ಅಲೆದಾಡುತ್ತಿದ್ದರೂ ಬೀಜ ದೊರೆಯದೇ ಹತಾಶರಾಗಿದ್ದಾರೆ. ತಾಲೂಕಿನಲ್ಲಿ ಕೆಲವು ಕಡೆ ಉತ್ತಮ ಮಳೆ ಆಗಿದ್ದು, ಕೆಲವೆಡೆ ಪಂಪ್‌ಸೆಟ್‌ಗಳನ್ನು ಅವಲಂಬಿಸಿ ಕೃಷಿ ಚಟುವಟಿಕೆ ಮಾಡಲಾಗುತ್ತಿದೆ. ಕಳೆದ ವರ್ಷ ಹತ್ತಿಗೆ ಸಿಕ್ಕ ಉತ್ತಮ ಬೆಲೆ ರೈತರಲ್ಲಿ ಒಂದಿಷ್ಟು ಆಶಾಭಾವನೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ರೈತರು ಹತ್ತಿ ಬಿತ್ತನೆಗೆ ಮುಂದಾಗಿದ್ದಾರೆ. ಪಟ್ಟಣದ ಕೆಲವು ಅಗ್ರೋ ಕೇಂದ್ರಗಳಲ್ಲಿ ಹತ್ತಿ ಬೀಜ ಇದ್ದರೂ ಕಾಳಸಂತೆಯಲ್ಲಿ ಬೇಕಾಬಿಟ್ಟಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.
ಹತ್ತಿ ದರ ಏರಿಕೆಯಾಗಿರುವುದರಿಂದ ರೈತರು ಹತ್ತಿ ಬೆಳೆಯಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ವ್ಯಾಪಾರಿಗಳು ರೈತರಿಗೆ ದಾಸ್ತಾನು ತೋರಿಸದೇ ಕಾಳ ಸಂತೆಯಲ್ಲಿ ಮನಸ್ಸಿಗೆ ಬಂದ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.
ಹೀಗಾಗಿ ಅಗ್ರೋ ಕೇಂದ್ರಗಳಿಗೆ ರೈತರು ಅಲೆದಾಡಿದರೂ ಬೀಜ ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಮೂರು ಪಟ್ಟು ಹೆಚ್ಚಿನ ದರಕ್ಕೆ ಸಿಗುತ್ತಿದೆ. ಕೆಲವು ವ್ಯಾಪಾರಿಗಳು ತರಿಸಿದ ಬೀಜಗಳನ್ನು ಆಗ್ರೋ ಕೇಂದ್ರಗಳಲ್ಲಿ ಇಡದೇ ತಮ್ಮ ಗೋದಾಮುಗಳಲ್ಲಿ ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಪ್ರಸಕ್ತ ವರ್ಷ ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ 1,22,311 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ತೊಗರಿ 66,050 ಹೆಕ್ಟೇರ್ ಮತ್ತು ಹತ್ತಿ 47,725 ಹೆಕ್ಟೇರ್ ಪ್ರದೇಶಲ್ಲಿ ಬಿತ್ತನೆ ಮಾಡಲಾಗುತ್ತಿದೆ.
ನಿಗದಿತ ಮಾರುಕಟ್ಟೆ ಬೆಲೆಗೆ ಬೀಜ, ರಸಗೊಬ್ಬರ ಮಾರಾಟ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳು ಅಗ್ರೋ ಮಾಲೀಕರಿಗೆ ಆದೇಶ ನೀಡಿದರೂ, ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಹತ್ತಿ ಬೀಜ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.
ತಾಲೂಕಿನಲ್ಲಿ ರೈತರು ಮುಂಗಾರು ಬಿತ್ತನೆಗೆ ತಯಾರಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕು. ಕೆಲವು ಕಡೆ ನಕಲಿ ಹತ್ತಿ ಬೀಜ ಮಾರಾಟ ಮಾಡಲಾಗುತ್ತಿದೆ. ಅಂತವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಿ ಅವರ ಪರವಾನಗಿ ರದ್ದು ಮಾಡಬೇಕು. -ಶಿವಲಿಂಗ ಹಳ್ಳಿ ಸೊನ್ನ, ಕರವೇ ಹೋರಾಟಗಾರ
ಪಟ್ಟಣದಲ್ಲಿರುವ ಅಗ್ರೋ ಕೇಂದ್ರಗಳಿಗೆ ಪ್ರತಿನಿತ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದ್ದು, ಈಗಾಗಲೇ ಅಗ್ರೋ ಕೇಂದ್ರಗಳಲ್ಲಿರುವ ಹತ್ತಿ ಬೀಜವನ್ನು ರೈತರು ಖರೀದಿ ಮಾಡುತ್ತಿಲ್ಲ. ರೈತರು ಕೇಳುತ್ತಿರುವ ಕೆಲ ಕಂಪನಿಯ ಹತ್ತಿ ಬೀಜ ಲಭ್ಯವಿಲ್ಲದ ಕಾರಣ ಗೊಂದಲ ಉಂಟಾಗಿದೆ. ನಕಲಿ ಬೀಜ ಮಾರಾಟ ತಡೆಗೆ ತಂಡ ರಚಿಸಿ ಪರಿಶೀಲನೆ ನಡೆಸಲಾಗುತ್ತಿದೆ. -ಶಿವಲಿಂಗಪ್ಪ ಅವಂಟಿ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ
-ವಿಜಯಕುಮಾರ ಎಸ್.ಕಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.