ಲಾಕ್‌ಡೌನ್‌ನಲ್ಲಿ ಮಳೆ ಸಂಕಷ್ಟ
ಶಹಾಬಾದ-ವಾಡಿ ಬಡಾವಣೆಗಳು ಜಲಾವೃತ ಧರೆಗುರುಳಿದ ವಿದ್ಯುತ್ ಕಂಬ-ಮರ
Team Udayavani, Apr 18, 2020, 10:55 AM IST
ಶಹಾಬಾದ: ಇಂದಿರಾ ನಗರ ಮಡ್ಡಿಯಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದಿದೆ
ಶಹಾಬಾದ: ಬಿಸಿಲಿನ ತಾಪಕ್ಕೆ ಕಾದ ತಾಲೂಕಿನ ಹಲವೆಡೆ ಶುಕ್ರವಾರ ಸಂಜೆ ವೇಳೆಗೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಗಿಡ, ವಿದ್ಯುತ್ ಕಂಬಗಳು ಬಿದ್ದಿದ್ದು, ಒಂದು ಮನೆ ಕುಸಿದಿದೆ.
ಕೊರೊನಾ ಹರಡುವ ಭೀತಿಯಿಂದ ಕಳೆದ ಸುಮಾರು 20 ದಿನಗಳಿಂದ ಮನೆಯಲ್ಲೇ ಇರುವ ಜನತೆ ಬಿಸಿಲಿನ ತಾಪಕ್ಕೆ ಬೆಂಡಾಗಿದ್ದರು. ತಾಲೂಕಿನಲ್ಲಿ ಶುಕ್ರವಾರ ಗುಡುಗು ಸಹಿತ ಸುಮಾರು ಅರ್ಧ ಗಂಟೆ ಸುರಿದ ಮಳೆಗೆ ಇಳೆ ತಂಪಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗಾಳಿ ಸಹಿತ ಮಳೆಗೆ ಅಲಸ್ಟಾಂ ಕಾಲೋನಿಯಲ್ಲಿ ಮರಗಳು ಉರುಳಿವೆ. ಅಲ್ಲದೇ ಮರಗಳ ಟೊಂಗೆಗಳು ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಿದ್ಯುತ್ ಕಡಿತವಾಗಿತ್ತು.
ನಗರದ ರಾಮಾ ಮೊಹಲ್ಲಾ ಪ್ರದೇಶದಲ್ಲಿ ಮರವೊಂದು ಬಿದ್ದಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಧರೆಗೆ ಉಳಿದಿವೆ. ಜೆಸ್ಕಾಂ ಸಿಬ್ಬಂದಿ ಜನರು ಗುಂಪಾಗಿ ಹೊರ ಬರಬಾರದೆಂದು ಎಚ್ಚರಿಸಿ, ಜನರನ್ನು ಚದುರಿಸಿ, ವಿದ್ಯುತ್ ಕಂಬಗಳ ದುರಸ್ತಿಗೆ ಕ್ರಮ ಕೈಗೊಂಡರು. ಇದರಿಂದ ನಗರದಲ್ಲಿ ಸಂಪೂರ್ಣ ವಿದ್ಯುತ್ ವ್ಯತ್ಯಯ ಉಂಟಾಯಿತು. ನಗರದ ಪಠಾಣಗಲ್ಲಿ ಪ್ರದೇಶದಲ್ಲಿ ಮಳೆಯಿಂದ ಚರಂಡಿ ತುಂಬಿ ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಕೆಲ ಮನೆಗಳ ಎದುರು ನೀರು ನಿಂತಿದ್ದರಿಂದ ಮನೆಯಿಂದ ಹೊರ ಬರಲು ಸಾಧ್ಯವಾಗಲಿಲ್ಲ.
ಇಂದಿರಾ ನಗರ ಮಡ್ಡಿ-2ರ ಕಾಳನೂರ ಓಣಿ ಪ್ರದೇಶದಲ್ಲಿ ವಿಕಲಚೇತನ್ ಶಂಕರ ಎನ್ನುವರ ಮನೆಯ ಗೋಡೆ ಕುಸಿದಿದ್ದರಿಂದ ಛಾವಣಿ ಸ್ವಲ್ಪ ಮಟ್ಟಿಗೆ ಬಿದ್ದಿದೆ. ಜೆಪಿ ಕಾಲೋನಿಯ ಕಾಶಪ್ಪ ಎನ್ನುವರ ಮನೆಯ ಮೇಲೆ ಮರವೊಂದು ಬಿದ್ದಿದ್ದರ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.