ಸಾಮಗ್ರಿ ವಿತರಣೆ: ಸಾಮಾಜಿಕ ಅಂತರ ಮಾಯ
Team Udayavani, May 30, 2020, 10:51 AM IST
ಸಾಮಾಜಿಕ ಅಂತರವಿಲ್ಲದೇ ಆಹಾರ ಸಾಮಗ್ರಿ ಪಡೆಯಲು ಕುಳಿತ ಮಹಿಳೆಯರು
ಶಹಾಬಾದ: ತಾಲೂಕಿನ ಗೋಳಾ (ಕೆ) ಗ್ರಾಮದಲ್ಲಿ ಸಾಮಾಜಿಕ ಅಂತರವಿಲ್ಲದೇ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹಾಗೂ ತಾಲೂಕಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿಯೇ ಶುಕ್ರವಾರ ಬಡವರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಿದರು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಬಡ ಜನರಿಗೆ ಆಹಾರ ಸಾಮಗ್ರಿಗಳನ್ನು ಟ್ರಕ್ ಮೂಲಕ ತಂದು ಹಂಚಲಾಯಿತು. ಶಾಸಕರು ಬರುವುದಕ್ಕಿಂತ ಮುಂಚೆ ಗೋಳಾ (ಕೆ) ಗ್ರಾಮದ ಬಡ ಮಹಿಳೆಯರನ್ನು ಗ್ರಾಮದ ಶಾಲೆಯೊಂದರಲ್ಲಿ ಸಾಮಾಜಿಕ ಅಂತರವಿಲ್ಲದೇ ಕೂಡಿಸಲಾಗಿತ್ತು. ಸರ್ಕಾರದ ಆದೇಶ ಗಾಳಿಗೆ ತೂರಿದರೂ ಸ್ಥಳದಲ್ಲಿಯೇ ಬಿಡಾರ ಹೂಡಿದ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದರು.
ಶಾಸಕರು ಆಹಾರ ಸಾಮಗ್ರಿಗಳನ್ನು ಹಂಚಲು ಪ್ರಾರಂಭಿಸುತ್ತಿದ್ದಂತೆ ಫಲಾನುಭವಿಗಳಿಗಿಂತ ಬಿಜೆಪಿ ಕಾರ್ಯಕರ್ತರೇ ಕಾಣುತ್ತಿದ್ದರು. ಆಹಾರ ಪೊಟ್ಟಣಕ್ಕಾಗಿ ಮುಗಿಬೀಳುತ್ತಿದ್ದರೂ ಯಾರೂ ಏನು ಮಾಡಲಿಲ್ಲ. ಕೆಲವರು ಮಾಸ್ಕ್ ಧರಿಸಿದರೆ ಬಹುತೇಕರು ಮಾಸ್ಕ್ ಧರಿಸದೇ ಇದ್ದುದಕ್ಕೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು. ಶಾಸಕರ ಮುಂದೆಯೇ ಇಷ್ಟೆಲ್ಲ ಬೆಳವಣಿಗೆ ನಡೆದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಧೋರಣೆ ತೋರಿದರು.
ತಹಶೀಲ್ದಾರ್ ಸುರೇಶ ವರ್ಮಾ, ಕೋವಿಡ್-19 ನೋಡಲ್ ಅಧಿಕಾರಿ ನೀಲಗಂಗಮ್ಮ ಬಬಲಾದ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ತೊನಸನಹಳ್ಳಿ (ಎಸ್) ಗ್ರಾ.ಪಂ ಅಧ್ಯಕ್ಷ ವಿಜಯಾನಂದ ಮಾಣಿಕ್, ಶಾಂತಕುಮಾರ ಮಾಣಿಕ್, ಮರಲಿಂಗ ಗಂಗಭೋ, ರವಿ ಸಣತಮ್, ಶಿವಕುಮಾರ ನಾಯ್ಕಲ್, ಗ್ರಾ.ಪಂ ಸದಸ್ಯೆ ರಾಜೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.