ಕೋವಿಡ್ ತಡೆಗೆ ನಗರಸಭೆ ಸದಸ್ಯರ ಸಹಕಾರ ಅಗತ್ಯ: ಡಿಸಿ
Team Udayavani, Jun 11, 2020, 12:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಪುರ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಲಾಕ್‌ಡೌನ್ ಸಡಿಲಿಕೆ ಜತೆಗೆ ಕೋವಿಡ್ ಸೋಂಕು ತಡೆಗೆ ಸರ್ಕಾರ ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊರ ರಾಜ್ಯ, ದೇಶಗಳಿಂದ ಆಗಮಿಸುವ ಜನರ ಪತ್ತೆ ಹಚ್ಚುವಿಕೆಯಲ್ಲಿ ನಗರಸಭೆ ಸದಸ್ಯರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.
ಇಲ್ಲಿನ ನಗರಸಭೆ ಸಭಾಂಗಣದಲ್ಲಿ ನಡೆದ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಕಡ್ಡಾಯಗೊಳಿಸಬೇಕಿದೆ. ನಗರದಲ್ಲಿ ಯಾರೊಬ್ಬರೂ ಸಮರ್ಪಕವಾಗಿ ನಿಯಮ ಪಾಲಿಸುತ್ತಿಲ್ಲ. ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಜನತೆ ನಿಯಮ ಪಾಲಿಸುವಂತೆ ಕ್ರಮ ವಹಿಸಬೇಕು. ಅಧಿಕಾರಿಗಳಿಗೆ ನಗರಸಭೆ ಸದಸ್ಯರು ಸಾಥ್ ನೀಡಬೇಕು. ಯಾರಾದರೂ ಹೊರ ರಾಜ್ಯ, ದೇಶಗಳಿಂದ ಆಗಮಿಸಿದಲ್ಲಿ ಅವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲು ಮನವೊಲಿಸಬೇಕು. ಸದಸ್ಯರು ಈ ಕುರಿತು ಜನರಲ್ಲಿ ಜಾಗೃತಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ಜಗನ್ನಾಥರಡ್ಡಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ಟಿಎಚ್‌ಒ ಡಾ| ರಮೇಶ ಗುತ್ತೇದಾರ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.