ಶಾರ್ಟ್ ಸರ್ಕ್ಯೂಟ್; ಸುಟ್ಟ ಕಿರಾಣಿ ಅಂಗಡಿ
Team Udayavani, Apr 20, 2022, 2:22 PM IST
ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣ ಸಮೀಪದ ಡಿಸಿಸಿ ಬ್ಯಾಂಕ್ ಎದುರಿಗೆ ಇರುವ ಕಿರಾಣಿ ಅಂಗಡಿಗೆ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ದಿಂದ ಬೆಂಕಿ ಹತ್ತಿಕೊಂಡಿದ್ದರಿಂದ ಅಂಗಡಿಯಲ್ಲಿದ್ದ ಸರಕು-ವಸ್ತುಗಳು ಸಂಪೂರ್ಣ ಸುಟ್ಟಿವೆ.
ಪಟ್ಟಣದ ನಿವಾಸಿ ಅಮಜದ್ ತಜಮುಲ್ಲಾ ಎನ್ನುವನಿಗೆ ಈ ಅಂಗಡಿ ಸೇರಿದ್ದಾಗಿದೆ. ಕಳೆದ ಆರು ತಿಂಗಳಿಂದ ಬಸ್ ನಿಲ್ದಾಣ ಹತ್ತಿರ ಮುಖ್ಯರಸ್ತೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ. ಸೋಮವಾರ ರಾತ್ರಿ ಕಿರಾಣಿ ಅಂಗಡಿ ವ್ಯಾಪಾರ ಕೈಗೊಂಡು ಕೀಲಿ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕಿರಾಣಿ ಅಂಗಡಿಯಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ನೋಡಿ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಶೆಟರ್ ಮುರಿದು, ಕಿರಾಣಿ ಅಂಗಡಿಯಲ್ಲಿ ಬೆಂಕಿಯಿಂದ ಸುಡುತ್ತಿದ್ದ ಬೆಲೆ ಬಾಳುವ ಆಹಾರ ಪದಾರ್ಥಗಳನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.
ಒಟ್ಟು 45ಲಕ್ಷ ರೂ.ಗಳಷ್ಟು ಅಂದಾಜು ಹಾನಿಯಾಗಿದೆ ಎಂದು ವ್ಯಾಪಾರಸ್ಥ ಅಮಜದ್ ತಜಮುಲ್ಲಾ ಇನಾಂದಾರ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಬೆಂಕಿಯಿಂದ ಹಾನಿಗೊಳಗಾದ ಸಂತ್ರಸ್ತ ವ್ಯಾಪಾರಸ್ಥನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಸಮಾಜ ಸೇವಕರಾದ ಕೆ.ಎಂ.ಬಾರಿ, ಅಬ್ದುಲ್ ಬಾಸೀತ್ ಮನವಿ ಮಾಡಿದ್ದಾರೆ.
ತಹಶೀಲ್ದಾರ್-ಕಂದಾಯ ಸಿಬ್ಬಂದಿ ಪರಿಶೀಲನೆ: ಪಟ್ಟಣದಲ್ಲಿ ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ಹತ್ತಿಕೊಂಡಿರುವ ಘಟನೆ ಕುರಿತು ವರದಿ ನೀಡುವಂತೆ ಮುಖ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಅಂಜುಮ ತಬಸುಮ ತಿಳಿಸಿದ್ದಾರೆ.
ಕಂದಾಯ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿರಾಣಿ ಅಂಗಡಿಯಲ್ಲಿದ್ದ ಅಕ್ಕಿ, ಗೋಧಿ, ಜೋಳ, ಹಿಟ್ಟು, ಎಣ್ಣೆ, ಸಾಬೂನು, ಶೇಂಗಾ, ಮಸಾಲಾ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಈ ಕುರಿತು ವರದಿ ನೀಡಲು ತಿಳಿಸಲಾಗಿದೆ ಎಂದರು.
ಈ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು. ಹಾನಿ ಕುರಿತು ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ವರದಿ ನೀಡಬೇಕಾಗಿತ್ತು. ಆದರೆ ಐನೋಳಿಯಲ್ಲಿ ಕಳೆದ ಶನಿವಾರ ವಿದ್ಯುತ್ ಸ್ಪರ್ಶದಿಂದ ಇಬ್ಬರು ಲೈನ್‌ಮನ್‌ಗಳ ಮೈ ಸುಟ್ಟ ಘಟನೆಗೆ ಸಂಬಂಧಿಸಿದಂತೆ ಎಸ್‌ಒ ಅವರನ್ನು ಅಮಾನತು ಮಾಡಲಾಗಿದೆ. ಎಇಇ ಉಮೇಶ ಗೋಳಾ ಅವರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಭಾರಿ ಜೆಸ್ಕಾಂ ಎಇಇ ಅವರಿಂದ ತನಿಖೆ ನಡೆಸಬೇಕಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.