ಸಮಾಜ ಸೇವೆಯಲ್ಲೇ ಆನಂದ: ಮತ್ತಿಮಡು
Team Udayavani, Nov 19, 2021, 5:47 PM IST
ಶಹಾಬಾದ: ಸಮಾಜದಲ್ಲಿ ಸೇವಾ ಮನೋಭಾವ ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಬುಧವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸಮಾಜ ಸೇವೆ ಗುರುತಿಸಿ ರಾಜ್ಯ ಮಟ್ಟದ “ಭಂಡಾರ ಸೇವಾ ರತ್ನ’ ಪ್ರಶಸ್ತಿ ಪಡೆದುಕೊಂಡ ಬಿಜೆಪಿ ಮುಖಂಡ ಬಸವರಾಜ ಮದ್ರಕಿ ಅವರನ್ನು ಸನ್ಮಾನಿಸಿ, ಅವರು ಮಾತನಾಡಿದರು.
ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ. ಸಮಾಜ ಸೇವೆ ಪುಣ್ಯದ ಕೆಲಸವಾಗಿದೆ. ಮನುಷ್ಯ ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿ ಆಗುತ್ತಿದ್ದಾನೆ. ಕೆಲವರು ತಮ್ಮ ಕುಟುಂಬಕ್ಕಷ್ಟೇ ಸೀಮಿತರಾಗುತ್ತಿದ್ದಾರೆ. ಸಮಾಜದ ಅಭಿವೃದ್ಧಿಗೆ ಹಣವುಳ್ಳವರು ಶ್ರಮಿಸುತ್ತಿರುವುದು ವಿರಳವಾಗಿದೆ. ಆದರೆ ಬಸವರಾಜ ಮದ್ರಕಿ ಅವರು ಕುರುಬ ಸಮಾಜಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಾಗರಾಜ ಮೇಲಗಿರಿ, ಕನಕಪ್ಪ ದಂಡಗುಳಕರ್, ನಿಂಗಣ್ಣ ಹುಳಗೊಳ್ಕರ್,ಬಸವರಾಜ ಬಿರಾದಾರ, ಸಿದ್ರಾಮ್ ಕುಸಾಳೆ, ಚಂದ್ರಕಾಂತ ಗೊಬ್ಬೂರ, ಡಿ.ಸಿ. ಹೊಸಮನಿ, ಸುಭಾಷ ಜಾಪೂರ, ಸಂಜಯ ವಿಠಕರ್, ಭೀಮಯ್ಯ ಗುತ್ತೇದಾರ, ದತ್ತು ಫಂಡ, ಶ್ರೀನಿವಾಸ ಹಾಗೂ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.