ಸಮಾಜ ಸೇವೆ ದೇವರು ನೀಡಿದ ಅವಕಾಶ
Team Udayavani, Mar 10, 2022, 10:56 AM IST
ಯಡ್ರಾಮಿ: ಎಲ್ಲ ಸಮಾಜ ಬಾಂಧವರ ನೋವು ನಲಿವುಗಳಿಗೆ ಸ್ಪಂದಿಸುವಂತಹ ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದ ದಿ. ರುದ್ರಗೌಡ ಬಿರಾದಾರ ಸ್ಮರಣೀಯರಾಗಿದ್ದಾರೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.
ತಾಲೂಕಿನ ಮುರಗಾನೂರ ಗ್ರಾಮದಲ್ಲಿ ದಿ.ರುದ್ರಗೌಡ ಬಿರಾದಾರ ಅವರ ಪ್ರಥಮ ಪುಣ್ಯಸ್ಮರಣೆ ಹಾಗೂ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜ ಸೇವೆ ಮಾಡುವುದು ಮನುಷ್ಯನಿಗೆ ದೇವರು ನೀಡಿದ ಉತ್ತಮ ಅವಕಾಶ. ಅದರಲ್ಲೂ ನಿಸ್ವಾರ್ಥದಿಂದ ಸೇವೆ ಮಾಡಿದಾಗ ಅದರ ಮೌಲ್ಯ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ದಿ.ರುದ್ರಗೌಡರ ಜೀವನ ಆದರ್ಶಪ್ರಾಯವಾಗಿದೆ ಎಂದರು.
ಸೊನ್ನ ವಿರಕ್ತಮಠದ ಪೂಜ್ಯ ಡಾ| ಶಿವಾನಂದ ಮಹಾ ಸ್ವಾಮೀಜಿ, ಬಸವನ ಸಂಗೋಳಗಿಯ ಪೂಜ್ಯ ಮದಗೊಂಡ ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಹಿರಿಯ ಮುಖಂಡ ಮಲ್ಲಿನಾಥಗೌಡ ಪಾಟೀಲ ಯಲಗೋಡ, ರಮೇಶ ವಕೀಲ ಕುಲಕರ್ಣಿ, ಜೇವರ್ಗಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹಳ್ಳೆಪ್ಪಾಚಾರ್ಯ ಜೋಶಿ, ಮಾಜಿ ಜಿಪಂ ಸದಸ್ಯ ರೇವಣಸಿದ್ಧಪ್ಪ ಸಂಕಾಲಿ, ಭೀಮರಾವ್ ಗುಜಗೊಂಡ, ಶಿವಾನಂದ ಸಾಹು ಭಾಸಗಿ, ಮಲ್ಲಣ್ಣಗೌಡ ಬಿರಾದಾರ ಮಾಗಣಗೇರಿ, ಶರಣಗೌಡ ಹಿರೇಗೌಡರ, ರುಕುಂ ಪಟೇಲ, ಬಸವರಾಜ ಖಾನಗೌಡರ್, ನಿಂಗಣ್ಣ ಬಿರಾದಾರ, ಬಸವಂತ್ರಾಯಗೌಡ ಬಿರಾದಾರ, ಗಂಗಾಧರ ಹೊಸಮನಿ, ದಿ. ರುದ್ರಗೌಡ ಬಿರಾದಾರ ಹಾಗೂ ಅಭಿಮಾನಿ ಬಳಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.