ಹಿಜಾಬ್ ನಿಷೇಧಕ್ಕಾಗಿ ಶ್ರೀರಾಮಸೇನೆ ಪ್ರತಿಭಟನೆ
Team Udayavani, Feb 8, 2022, 10:04 AM IST
ಕಲಬುರಗಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಬೇಕು ಮತ್ತು ಏಕ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆಯ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಶ್ರೀರಾಮಸೇನೆಯ ವಿದ್ಯಾರ್ಥಿ ಘಟಕದ ಕಾರ್ಯಕರ್ತರು, ತಮ್ಮ ಜಾತಿ, ಧರ್ಮವನ್ನು ತೋರಿಸಲು ಶಾಲಾ-ಕಾಲೇಜುಗಳಿಗೆ ಹಿಜಾಬ್ ಮತ್ತು ಬುರ್ಕಾ ಧರಿಸಿಕೊಂಡು ಬರಲಾಗುತ್ತಿದೆ. ಇದಕ್ಕೆ ನಿರ್ಬಂಧಿಸಬೇಕೆಂದು ಆಗ್ರಹಿಸಿದರು.
ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಪ್ರಕಾರ ಭಾರತ ಭಾವೈಕ್ಯತೆ ರಾಷ್ಟ್ರ. ಶಾಲಾ-ಕಾಲೇಜುಗಳಲ್ಲಿ ಜಾತಿ-ಧರ್ಮ, ಶ್ರೀಮಂತ-ಬಡವ ಎಂಬುವುದು ತೋರದೆ ನಾವೆಲ್ಲರೂ ಒಂದೇ, ಭಾರತೀಯರು. ಇದಕ್ಕಾಗಿ ಏಕರೂಪ ಸಮವಸ್ತ್ರವನ್ನು ರೂಪಿಸಲಾಗಿದೆ. ಆದರೆ, ತಮ್ಮ ಧರ್ಮ ಎತ್ತಿ ತೋರಿಸಲು ಹಿಜಾಬ್, ಬುರ್ಕಾ ಧರಿಸಿ ವಿದ್ಯಾ ಮಂದಿರಗಳಿಗೆ ಬರುತ್ತಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ ಸಂಘಟನೆಯ ರಾಜ್ಯಾಧ್ಯಕ್ಷ, ಆಂದೋಲಾದ ಸಿದ್ದಲಿಂಗ ಸ್ವಾಮೀಜಿ, ರಾಜ್ಯ ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿದೆ. ಸರ್ಕಾರದ ಆದೇಶದಂತೆ ಸಮವಸ್ತ್ರ ಧರಿಸಿ ಶಿಕ್ಷಣ ನೀತಿ, ನಿಯಮಕ್ಕೆ ಗೌರವ ಕೊಡಬೇಕು. ಬರಲು ಸರ್ಕಾರದ ಆದೇಶದ ಉಲ್ಲಂಘಿಸಿ ಬರುವವರನ್ನು ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ಯಾವುದೇ ಮುಲಾಜಿಲ್ಲದೇ ವರ್ಗಾವಣೆ ಪತ್ರ ಕೊಟ್ಟು ಕಳುಹಿಸಬೇಕೆಂದು ಆಗ್ರಹಿಸಿದರು.
ಶಾಲಾ-ಕಾಲೇಜುಗಳಿಗೆ ಹಿಜಾಬ್, ಬುರ್ಕಾ ಧರಿಸಿಕೊಂಡು ಬರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇದನ್ನು ಅಲ್ಲಿಯವರೆಗೂ ನಿಲ್ಲಿಸುವುದಿಲ್ಲವೋ, ಅಲ್ಲಿಯವರೆಗೆ ಕೇಸರಿ ಶಾಲು, ಪಂಚೆ ಸಮೇತ ಹಿಂದೂ ಸಂಪ್ರದಾಯದಂತೆ ಯುವಕರು ಬರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಹೇಶ ಕೆಂಭಾವಿ, ಪ್ರಧಾನ ಕಾರ್ಯದರ್ಶಿ ಶಿವಾನಂದ ಅಷ್ಟಗಿ, ಕಾರ್ಯ ದರ್ಶಿ ಈಶ್ವರ ಹಿಪ್ಪರಗಿ, ಉಪಾಧ್ಯಕ್ಷ ರಾಕೇಶ ಜಮಾದಾರ, ಜಿಲ್ಲಾ ಗ್ರಾಮಾಂತರ ವಲಯದ ಅಧ್ಯಕ್ಷ ಅರುಣಕುಮಾರ ಸುಲ್ತಾನಪುರ, ಉತ್ತರ ವಲಯ ಅಧ್ಯಕ್ಷ ಸಂತೋಷ ಹಿರೇಮಠ, ಕಾರ್ಯಕರ್ತರಾದ ವಿಕಾಸ ಕುಮಸಿ, ಗುರು ಜವಳಿ, ಅಭಿ ಬಿಲಗುಂದಿ, ಸಿದ್ಧಾರ್ಥ್ ಚಿಕ್ಕಮಠ, ನಾಗೇಶ ಅಡೆ, ಶರಣಕುಮಾರ ಪಾಟೀಲ, ಅಂಕುಶ ಬೋಸ್ಲೆ, ಮಹಾಲಿಂಗ ಪೂಜಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಕೊಂಡು ಮಾತ್ರ ಬರಬೇಕೆಂದು ಸರ್ಕಾರದ ಆದೇಶ. ಇದನ್ನೂ ಮೀರಿ ಶಾಲಾ-ಕಾಲೇಜುಗಳಿಗೆ ಹಿಜಾಬ್, ಬುರ್ಕಾ ಧರಿಸಿಕೊಂಡೇ ಬರುವುದಾದರೆ ಪಾಕಿಸ್ತಾನಕ್ಕೋ, ತಾಲಿಬಾನ್‌ಗೋ ಹೋಗಿ ಶಿಕ್ಷಣ ಕಲಿಯಲಿ. -ಸಿದ್ದಲಿಂಗ ಸ್ವಾಮೀಜಿ, ರಾಜ್ಯಾಧ್ಯಕ್ಷ, ಶ್ರೀರಾಮಸೇನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.