ವಿದ್ಯಾರ್ಥಿಗಳೇ ಓದಿನತ್ತ ಗಮನ ಹರಿಸಿ: ಪಾಳಾ
Team Udayavani, Dec 12, 2021, 11:37 AM IST
ಅಫಜಲಪುರ: ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ ವಾದದ್ದು. ಹೀಗಾಗಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಿಪಿಐ ಜಗದೇವಪ್ಪ ಪಾಳಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಲೂಕಿನ ಗೊಬ್ಬೂರ (ಬಿ) ಗ್ರಾಮದ ಸಿದ್ಧಾರ್ಥ ಪದವಿ ಕಾಲೇಜಿನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಶಿಕ್ಷಕರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ ಎಂದರು.
ಚಿತ್ತಾಪುರ ಪದವಿ ಕಾಲೇಜಿನ ಪ್ರಾಚಾರ್ಯ ಡಾ| ವಿಜಯಕುಮಾರ ಸಾಲಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಅವಶ್ಯಕ. ಇವೆರಡನ್ನು ನಿಮ್ಮ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಭವಿಷ್ಯದಲ್ಲಿ ಸೋಲು ಸುಳಿಯುವುದಿಲ್ಲ ಎಂದು ಹೇಳಿದರು.
ಹರ್ಷವರ್ಧನ ಪದವಿ ಕಾಲೇಜಿನ ಪ್ರಾಚಾರ್ಯ ಡಾ| ಸಂಗಣ್ಣ ಎಂ. ಸಿಂಗೆ ಆನೂರ, ಡಾ| ಪಂಡಿತ ಬಿ.ಕೆ ಮಾತನಾಡಿ ಇತ್ತೀಚೆಯ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದಾಗಿ ಹಾಳಾಗುತ್ತಿದ್ದಾರೆ. ಓದುವ ಸಮಯದಲ್ಲಿ ಮೊಬೈಲ್ ನಿಂದ ದೂರವಿರಿ. ತಂತ್ರಜ್ಞಾನಗಳನ್ನು ನಿಮ್ಮ ಜ್ಞಾನಕ್ಕೆ ಅನುಕೂಲವಾಗುವಂತೆ ಉಪಯೋಗಿಸಿಕೊಳ್ಳಿ. ಇಲ್ಲದಿದ್ದರೆ ಮೊಬೈಲ್ ನಿಮ್ಮ ಬದುಕನ್ನು ನಾಶ ಮಾಡುತ್ತದೆ ಎಂದು ಎಚ್ಚರಿಸಿದರು.
ಮಲ್ಲು ದೇವತ್ಕಲ್, ಶಿವಾನಂದ ಕೌದಿ, ದೇವಾನಂದ ಸಾವಳಗಿ, ಶಂಕರ ಪೋದ್ದಾರ, ಶರಣು ಅಲೆª, ಬಸವರಾಜ ನಿಂಬರಗಿ, ಪ್ರಭುಲಿಂಗ ಪಾಟೀಲ, ಮಹಾದೇವ ವಿಶ್ವಕರ್ಮ, ರಮಾ ಅರ್ಜುಣಗಿಕರ್, ಜ್ಯೋತಿ ಕಡಗಂಚಿ, ಜ್ಯೋತಿ ಕಾರಜೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ದುರ್ಬಲ ನೀರ್ಕೆರೆ ಸೇತುವೆ; ಹೊಸ ವರುಷಕ್ಕೆ ಹೊಸತು?
Mulki ರೈಲು ನಿಲ್ದಾಣಕ್ಕೆ ನಗರ ಪಂಚಾಯತ್ ಮೂಲ ಸೌಕರ್ಯ
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.