ಬಾಲ್ಯ ವಿವಾಹ ತಡೆ ಪ್ರಕರಣ ವರದಿ ಸಲ್ಲಿಸಿ; ಜಿಲ್ಲಾಧಿಕಾರಿ
ಮಾಜಿ ದೇವದಾಸಿಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ
Team Udayavani, Feb 5, 2021, 3:48 PM IST
ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ 2020-21ನೇ ಸಾಲಿನಲ್ಲಿ ಬಾಲ್ಯ ವಿವಾಹ ತಡೆ ಪ್ರಕರಣಗಳಿಗೆ ಸಂಬಂ ಧಿಸಿದಂತೆ 1098 ಟೋಲ್ ಫ್ರೀ ಸಂಖ್ಯೆಗೆ ಬಂದ ದೂರಿನ ಕರೆಯ ಪ್ರತಿ ಪ್ರಕರಣದ ಸಮಗ್ರ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸಾ ಅಧಿ ಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ 89 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಸಭೆಗೆ ಮಾಹಿತಿ ನೀಡುತ್ತಿದ್ದಂತೆ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿಗಳು, 1098 ಟೋಲ್ ಫ್ರೀ ಸಂಖ್ಯೆಗೆ ಬಂದ ಕರೆ ಎಷ್ಟು ಎಂದು ಪ್ರಶ್ನಿಸಿದರು. ಆಗ ಚೈಲ್ಡ್‌ಲೈನ್ ಸಂಯೋಜಕ ಬಸವರಾಜ ಮಾತನಾಡಿ, 110 ಬಾಲ್ಯ ವಿವಾಹ ಆಗುವ ಪ್ರಕರಣಗಳು ಸೇರಿದಂತೆ 154 ಹುಸಿ ಕರೆಗಳ ಮಾಹಿತಿ ಬಂದಿವೆ ಎಂದರು. ಈ ಹಿನ್ನೆಲೆಯಲ್ಲಿ ಎಲ್ಲ ಸಿಡಿಪಿಒಗಳು ತಮ್ಮ ತಾಲೂಕಿನ ಪ್ರತಿ ಪ್ರಕರಣದ ಸಮಗ್ರ ವರದಿ ನೀಡುವಂತೆ ತಾಕೀತು ಮಾಡಿದರು.
ಬಾಲ್ಯ ವಿವಾಹ ತಡೆಗಟ್ಟಲು ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಪ್ರಕರಣ ಕಂಡುಬಂದಲ್ಲಿ ಸಂಬಂ ಧಿಸಿದವರ ಮೇಲೆ ಎಫ್ ಐಆರ್ ದಾಖಲಿಸಬೇಕು ಎಂದು ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.
ನಿರ್ಗತಿಕ, ನಿರಾಶ್ರಿತ, ವಿಧವೆಯರು, ವಿಚ್ಛೇದಿತರು ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ವಾಸಿಸಲೆಂದೆ ಕಲಬುರಗಿ ನಗರದಲ್ಲಿ ಎರಡು ಸ್ವಾಧಾರ ಗೃಹಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ 60 ಮಹಿಳೆಯರು ವಾಸವಿದ್ದಾರೆ. ಅವರಿಗೆ ಕಂಪ್ಯೂಟರ್, ಟೇಲರಿಂಗ್ ಒಳಗೊಂಡಂತೆ ಉತ್ತಮ ಆದಾಯ ನೀಡುವ ವೃತ್ತಿಗಳ ತರಬೇತಿ ನೀಡಬೇಕು. ಅವರು ತಮ್ಮ ಬದುಕು ತಾವೇ ಕಟ್ಟಿಕೊಳ್ಳಲು ಶಕ್ತರನ್ನಾಗಿಸಬೇಕು ಮತ್ತು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಇಂತಹ ಫಲಾನುಭವಿಗಳಿಗೆ ದೊರಕುವಂತಾಗಬೇಕು ಎಂದು ಜಿಲ್ಲಾಧಿ ಕಾರಿಗಳು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧಿಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಆರ್.ಶೆಟ್ಟರ್, ಡಿಎಚ್‌ಒ ಡಾ| ರಾಜಶೇಖರ ಮಾಲಿ, ಜಿಲ್ಲಾ ಶಸ್ತ್ರಜ್ಞ ಡಾ| ಅಂಬಾರಾಯ ರುದ್ರವಾಡಿ, ಡಿಎಸ್‌ಪಿ ಜೇಮ್ಸ್ ಮಿನೇಜಸ್, ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿ ಎಸ್.ಎನ್.ಹಿರೇಮಠ, ಆಹಾರ ಇಲಾಖೆ ಉಪನಿರ್ದೇಶಕ ದಯಾನಂದ ಪಾಟೀಲ, ಜಿಪಂ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಸಲಹೆಗಾರ ಭರತೇಶ ಶೀಲವಂತ, ಸಿಡಿಪಿಒಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪಾಲ್ಗೊಂಡಿದ್ದರು.
ಲೈಂಗಿಕ ಅಲ್ಪಸಂಖ್ಯಾತರಿಗೆ ಮನೆ ಮಂಜೂರಿಗೆ ನಿರ್ದೇಶನ ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ 500 ರೂ. ಮಾಸಾಶನ ನೀಡುವ ಯೋಜನೆ ಇದೆ. ಆದರೆ, ಕಂದಾಯ ಇಲಾಖೆಯಲ್ಲಿ ಯೋಜನೆ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲದ ಕಾರಣ ತಮಗೆ ಮಾಸಾಶನ ಸರಿಯಾಗಿ ತಲುಪುತ್ತಿಲ್ಲ. ಅಲ್ಲದೇ, ಮನೆಯಿಲ್ಲದೆ ಬಹಳಷ್ಟು ಜನ ಲೈಂಗಿಕ ಅಲ್ಪಸಂಖ್ಯಾತರಿದ್ದು, ಇವರಿಗೆ ಮನೆ ಮಂಜೂರು ಮಾಡಿಕೊಡಬೇಕು ಎಂದು ಲೈಂಗಿಕ ಅಲ್ಪಸಂಖ್ಯಾತರೊಬ್ಬರು ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಮಾಜಿ ದೇವದಾಸಿಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಮತ್ತು ನಿವೇಶನ ಹೊಂದಿದವರಿಗೆ ಮನೆ ನಿರ್ಮಿಸಿ ಕೊಡುವ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿ ಕಾರಿಗಳು ಮತ್ತು ಡಿಯುಡಿಸಿ ಯೋಜನಾ ನಿರ್ದೇಶಕರು ಸಮನ್ವಯ ಸಾಧಿಸಿಕೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ-ಮಂಜೂರು ಮಾಡಬೇಕೆಂದು ಡಿಸಿ ಜೋತ್ಸಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.